More

    ಸಂತ ಸೇವಾಲಾಲ್ ಜಯಂತಿ 15 ರಂದು

    ಬಳ್ಳಾರಿ: ನಗರದ ಜಿಲ್ಲಾ ಕ್ರೀಡಾಂಗಣ ರಸ್ತೆಯ ವಾಲ್ಮೀಕಿ ಭವನದಲ್ಲಿ ಫೆ.15 ರಂದು ಮಧ್ಯಾಹ್ನ 12.30ಕ್ಕೆ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮ ಏರ್ಪಡಿಸಲಾಗಿದೆ.

    ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಬಿ.ನಾಗೇಂದ್ರ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್‌ರೆಡ್ಡಿ ಅಧ್ಯಕ್ಷತೆ ವಹಿಸುವರು. ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್.ಗಣೇಶ್, ಸಂಸದರಾದ ವೈ.ದೇವೇಂದ್ರಪ್ಪ, ಕರಡಿ ಸಂಗಣ್ಣ, ರಾಜ್ಯಸಭೆ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಈ.ತುಕಾರಾಂ, ಬಿ.ಎಂ ನಾಗರಾಜ್, ವಿಧಾನಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಬಿ.ಪಾಟೀಲ್, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಪಾಲಿಕೆ ಮೇಯರ್ ಬಿ.ಶ್ವೇತಾ ಇತರರು ಭಾಗವಹಿಸಲಿದ್ದಾರೆ.

    ವೈದ್ಯಕೀಯ ದಾಖಲಾತಿ ವಿಭಾಗದ ಅಧಿಕಾರಿ ಡಾ.ಗುರುನಾಥ ಬಿ.ಚವ್ಹಾಣ್ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಜಯಂತಿಯ ಅಂಗವಾಗಿ ಮುನ್ಸಿಪಲ್ ಮೈದಾನದಿಂದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದ ವಾಲ್ಮೀಕಿ ಭವನದವರೆಗೆ ಮೆರವಣಿಗೆ ನಡೆಯಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts