More

  ಒಂದನೇ ಕ್ಲಾಸಿಂದ ಶಾಲೆ ಆರಂಭಿಸಲು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಂಭುಲಿಂಗನಗೌಡ ಆಗ್ರಹ

  ಬಳ್ಳಾರಿ: ರಾಜ್ಯದಲ್ಲಿ ಶಾಲೆಗಳನ್ನು ಒಂದನೇ ತರಗತಿಯಿಂದ ಪೂರ್ಣ ಪ್ರಮಾಣದಲ್ಲಿ ಆರಂಭಿಸುವುದರ ಜತೆಗೆ ಬಿಸಿಯೂಟ ಯೋಜನೆ ಶುರುಮಾಡಬೇಕೆಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಂಭುಲಿಂಗನಗೌಡ ಪಾಟೀಲ್ ಆಗ್ರಹಿಸಿದರು.

  ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪದವೀಧರ ಶಿಕ್ಷಕರಿಗೆ ಪದವೀಧರ ಸಹಶಿಕ್ಷಕರೆಂದು ಪದನಾಮ ಬದಲಾಯಿಸಿ ವೇತನ ಬಡ್ತಿ ನೀಡಬೇಕು. ಸೇವಾನಿರತ ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿಗಾಗಿ ಪರೀಕ್ಷಾ ವ್ಯವಸ್ಥೆ ರದ್ದುಪಡಿಸಬೇಕು. ದೈಹಿಕ ಶಿಕ್ಷಣ ಶಿಕ್ಷಕರಿಗೂ ಸಹಶಿಕ್ಷಕರಂತೆ ಬಡ್ತಿ ನೀಡಬೇಕು. ಶಿಕ್ಷಕರೊಂದಿಗೆ ಚರ್ಚಿಸಿದ ಬಳಿಕ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಬೇಕೆಂದು ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

  ಜ್ಯೇಷ್ಠತೆ ಆಧರಿಸಿ ಶಿಕ್ಷಣ ಸಂಯೋಜಕ ಹುದ್ದೆಗಳನ್ನು ಭರ್ತಿ ಮಾಡಬೇಕು. ಪ್ರಾಥಮಿಕ ಶಾಲೆಗಳಿಗೆ ಸಹಾಯಕರನ್ನು ನೇಮಕ ಮಾಡಬೇಕು. ಶಿಕ್ಷಕರ ಸೇವಾ ಪುಸ್ತಕವನ್ನು ಗಣಕೀಕರಣಗೊಳಿಸಬೇಕು. ಶಿಕ್ಷಕಮಿತ್ರ ಆ್ಯಪ್ ಮೂಲಕ ಮಾಸಿಕ ವೇತನದ ಮಾಹಿತಿ ನೀಡಬೇಕು. ಕೋವಿಡ್-19 ಕರ್ತವ್ಯ ನಿರ್ವಹಿಸಿದ ಶಿಕ್ಷಕರಿಗೆ ಗಳಿಕೆ ರಜೆ ನೀಡಬೇಕೆಂದು ಒತ್ತಾಯಿಸಿದರು. ಶಿಕ್ಷಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿ, ಸಂಘಟನಾ ಕಾರ್ಯದರ್ಶಿಗಳಾದ ಪದ್ಮಾವತಿ, ಬಸವರಾಜ, ಜಿಲ್ಲಾ ಅಧ್ಯಕ್ಷ ನಿಂಗಪ್ಪ, ಪ್ರಧಾನ ಕಾರ್ಯದರ್ಶಿ ಶಿವಾನಂದ ಹಾಗೂ ಇತರ ಪದಾಧಿಕಾರಿಗಳು ಹಾಜರಿದ್ದರು.

  ರಾಜ್ಯೋತ್ಸವ ರಸಪ್ರಶ್ನೆ - 22

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts