More

    ಶಿವಮೊಗ್ಗದಲ್ಲಿ ರಾಜ್ಯಮಟ್ಟದ ವೈಜ್ಞಾನಿಕ ಸಮ್ಮೇಳನ ನಾಳೆ: ಪರಿಷತ್ ಜಿಲ್ಲಾಧ್ಯಕ್ಷ ಆರ್.ಎಚ್.ಎಂ.ಚನ್ನಬಸವಸ್ವಾಮಿ ಮಾಹಿತಿ

    ಬಳ್ಳಾರಿ: ಶಿವಮೊಗ್ಗದಲ್ಲಿ ಡಿ.29ರಂದು ರಾಜ್ಯಮಟ್ಟದ ಪ್ರಥಮ ವೈಜ್ಞಾನಿಕ ಸಮ್ಮೇಳನ ನಡೆಯಲಿದ್ದು, ಮೌಢ್ಯಾಚರಣೆ, ಅವೈಜ್ಞಾನಿಕ ಕ್ರಿಯೆ ಹಾಗೂ ಚಿಂತನೆಗಳ ಬಗ್ಗೆ ಅರಿವು ಮೂಡಿಸಲಾಗುತ್ತದೆ ಎಂದು ರಾಜ್ಯ ವೈಜ್ಞಾನಿಕ ಪರಿಷತ್ ಜಿಲ್ಲಾಧ್ಯಕ್ಷ ಆರ್.ಎಚ್.ಎಂ.ಚನ್ನಬಸವಸ್ವಾಮಿ ಹೇಳಿದರು.

    ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮೇಳನದಲ್ಲಿ ಜಿಲ್ಲೆಯ ಶಿಕ್ಷಕ ಯು.ರಮೇಶ್‌ಗೆ ಎಚ್.ನರಸಿಂಹಯ್ಯ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಇವರು, ಮಕ್ಕಳಿಗೆ ಬೋಧನೆ ಜತೆಗೆ ಪೂರ್ವಜರ ಸಂಪ್ರದಾಯ, ಹಬ್ಬ-ಹರಿದಿನಗಳ ಆಚರಣೆ, ದೇವರ ಹೆಸರಲ್ಲಿ ಮೂಕಪ್ರಾಣಿಗಳ ವಧೆ, ನಿಧಿ ಆಸೆಗೆ ಮನುಷ್ಯರ ಬಲಿಯಂತಹ ಮೂಢನಂಬಿಕೆಗಳ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಮರುಜನ್ಮದ ನಂಬಿಕೆ, ದೇವರು ಮೈಮೇಲೆ ಬಂದವರಂತೆ ನಟಿಸಿ ಹೇಗೆ ಮೋಸ ಮಾಡುತ್ತಾರೆ ಎಂಬುದನ್ನು ನಾಟಕಗಳ ಮೂಲಕ ಸಾರ್ವಜನಿಕರಿಗೆ ತಿಳಿಸಿದ್ದಾರೆ. ಹೀಗಾಗಿ ಯು.ರಮೇಶ್‌ರನ್ನು ಎಚ್.ನರಸಿಂಹಯ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇದರಂತೆ ರಾಜ್ಯದ ಪ್ರತಿ ಜಿಲ್ಲೆಗೆ ಒಬ್ಬ ಸಾಧಕರನ್ನು ಆಯ್ಕೆ ಮಾಡಿ ಪ್ರಶಸ್ತಿ ನೀಡಲಾಗುವುದು ಎಂದರು.

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮೇಳನ ಉದ್ಘಾಟಿಸುವರು. ಇಸ್ರೋ ಮಾಜಿ ಅಧ್ಯಕ್ಷ ಎಸ್.ಕಿರಣ್‌ಕುಮಾರ್ ಅಧ್ಯಕ್ಷತೆ ವಹಿಸುವರು. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ನಿವೃತ್ತ ನ್ಯಾಯಾಧೀಶ ನಾಗಮೋಹನದಾಸ್, ಡಾ.ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಸ್ವಾಮಿ, ಸಚಿವರಾದ ಆರಗ ಜ್ಞಾನೇಂದ್ರ, ಕೆ.ಎಸ್.ಈಶ್ವರಪ್ಪ, ಅಶ್ವತ್ಥ ನಾರಾಯಣ, ಬಿ.ಸಿ.ನಾಗೇಶ್, ಸಂಸದ ಬಿ.ವೈ.ರಾಘವೇಂದ್ರ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts