More

    ವಿದ್ಯಾರ್ಥಿಗಳ ಬೆಳವಣಿಗೆಗೆ ಎನ್‌ಇಪಿ ಪೂರಕ

    ಬಳ್ಳಾರಿ: ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು (ಎನ್‌ಇಪಿ) ವಿದ್ಯಾರ್ಥಿ ಕೇಂದ್ರಿತವಾಗಿದ್ದು, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿದೆ ಎಂದು ವಿಎಸ್‌ಕೆವಿವಿ ಕುಲಪತಿ ಸಿದ್ದು ಪಿ.ಅಲಗೂರ ಹೇಳಿದರು.

    ನಗರದ ವೀರಶೈವ ಮಹಾವಿದ್ಯಾಲಯದಲ್ಲಿ ಗುರುವಾರ ಏರ್ಪಡಿಸಿದ್ದ ಶೈಕ್ಷಣಿಕ ಸಾಲಿನ ವಿವಿಧ ಸಾಂಸ್ಕೃತಿಕ ಸಂಘಗಳ ಉದ್ಘಾಟನ ಕಾರ್ಯಕ್ರಮದಲ್ಲಿ ಮಾತನಾಡಿದರು. ಎನ್‌ಇಪಿಯಲ್ಲಿ ವಿದ್ಯಾರ್ಥಿಗಳಿಗೆ ಇಷ್ಟವಾದ ವಿಷಯಗಳನ್ನು ಆರಿಸಿಕೊಂಡು ಅದೇ ವಿಷಯದಲ್ಲಿ ಮಹತ್ತರವಾದುದನ್ನು ಸಾಧಿಸಲು ಸಹಾಯವಾಗುತ್ತದೆ. ಆದ್ದರಿಂದ, ವಿದ್ಯಾರ್ಥಿಗಳು ಹಣದ ಹಿಂದೆ ಬೀಳದೆ ಸಾಧನೆಯತ್ತ ಗಮನ ಹರಿಸಬೇಕು ಎಂದರು.

    ಕಸಾಪ ಜಿಲ್ಲಾಧ್ಯಕ್ಷ ಡಾ.ನಿಷ್ಠಿ ರುದ್ರಪ್ಪ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಪಠ್ಯ ವಿಷಯಗಳಿಗಷ್ಟೇ ಸೀಮಿತವಾಗದೆ ಸಾಹಿತ್ಯಕ ಮತ್ತು ಸಾಂಸೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದಲ್ಲಿ ನಮ್ಮ ಪರಂಪರೆಯ ಇತಿಹಾಸವನ್ನು ತಿಳಿದುಕೊಳ್ಳಬಹುದು ಮತ್ತು ತಮ್ಮ ಜೀವನದಲ್ಲಿಯೂ ಉತ್ತಮ ನಾಗರೀಕರಾಗಬಹುದು ಎಂದರು.

    ವೀ.ವಿ. ಸಂಘದ ಅಧ್ಯಕ್ಷ ಗುರುಸಿದ್ಧಸ್ವಾಮಿ ಮಾತನಾಡಿ, ವೀವಿ ಸಂಘವು ತನ್ನ ಅಂಗ ಸಂಸ್ಥೆಗಳ ಮೂಲಕ ಹಿಂದುಳಿದ ಈ ಭಾಗದಲ್ಲಿ ಶಿಕ್ಷಣ ದಾಸೋಹವನ್ನು ಗೈಯುತ್ತ ಶಿಕ್ಷಿತ ಸಮಾಜ ನಿರ್ಮಿಸುವಲ್ಲಿ ಮಹತ್ತರ ಪಾತ್ರ ವಹಿಸಿದೆ. ಆದ್ದರಿಂದ ಇಂತಹ ಪ್ರತಿಷ್ಠಿತ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳೆಲ್ಲರೂ ಇಲ್ಲಿನ ಸಕಲ ಸೌಲಭ್ಯವನ್ನು ಉಪಯೋಗಿಸಿಕೊಂಡು ಜೀವನದಲ್ಲಿ ಉನ್ನತ ಸಾಧನೆ ಮಾಡುವ ಮೂಲಕ ಸಂಸ್ಥೆಗೆ ಕೀರ್ತಿ ತರಬೇಕೆಂದು ಹೇಳಿದರು. ಪ್ರಾಚಾರ್ಯ ಬಿ.ತಿಮ್ಮನಗೌಡ ಪಾಟೀಲ್, ಪ್ರಾಣಿಶಾಸ್ತ್ರ ವಿಭಾಗ ಮುಖ್ಯಸ್ಥ ಡಾ.ಜಿ.ಮನೋಹರ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts