More

    ಬಳ್ಳಾರಿ ತಾಲೂಕು 6ನೇ ಕನ್ನಡ ಸಾಹಿತ್ಯ ಸಮ್ಮೇಳನ 11ರಂದು

    ಬಳ್ಳಾರಿ :ಬಳ್ಳಾರಿ ತಾಲೂಕು 6ನೇ ಕನ್ನಡ ಸಾಹಿತ್ಯ ಸಮ್ಮೇಳನ ಫೆ.11ರಂದು ಇಲ್ಲಿನ ರಾಘವ ಕಲಾ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಸಾಪ ತಾಲೂಕು ಘಟಕದ ಅಧ್ಯಕ್ಷ ನಾಗರೆಡ್ಡಿ ಕೆ.ವಿ.ಹೇಳಿದರು.

    ಅಂದು ಬೆಳಗ್ಗೆ 7.30ಕ್ಕೆ ಪಾಲಿಕೆ ಮೇಯರ್ ರಾಜೇಶ್ವರಿ ಎಂ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಲಿದ್ದಾರೆ. ಕಸಾಪ ಜಿಲ್ಲಾಧ್ಯಕ್ಷ ಡಾ.ನಿಷ್ಠಿ ರುದ್ರಪ್ಪ ನಾಡಧ್ವಜರೋಹಣ ನೆರವೇರಿಸಲಿದ್ದಾರೆ. 8.30ಕ್ಕೆ ವಿವಿಧ ಕಲಾ ತಂಡಗಳಿಂದ ಭುವನೇಶ್ವರಿ ತಾಯಿ ಹಾಗೂ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಲಿದೆ ಎಂದು ಸೋಮವಾರ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

    ಮೆರವಣಿಗೆಗೆ ಶಾಸಕ ಜಿ.ಸೋಮಶೇಖರ ರೆಡ್ಡಿ ಚಾಲನೆ ನೀಡಲಿದ್ದಾರೆ. ಕಮ್ಮ ಭವನದಿಂದ ಆರಂಭಗೊಂಡು ಗಡಿಗಿ ಚನ್ನಪ್ಪ ವೃತ್ತದ ಮಾರ್ಗವಾಗಿ ರಾಘವ ಕಲಾಮಂದಿರಕ್ಕೆ ಮೆರವಣಿಗೆ ತಲುಪಲಿದೆ. ನಂತರ ಬೆಳಗ್ಗೆ 10.30ಕ್ಕೆ ಸಮ್ಮೇಳನದ ಉದ್ಘಾಟನೆ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಭಾಗವಹಿಸಲಿದ್ದಾರೆ. ಕಸಾಪ ಜಿಲ್ಲಾಧ್ಯಕ್ಷ ಡಾ.ನಿಷ್ಠಿ ರುದ್ರಪ್ಪ ಅಧ್ಯಕ್ಷತೆವಹಿಸಲಿದ್ದಾರೆ. ನಾಡೋಜ ಬೆಳಗಲ್ ವೀರಣ್ಣ ಅವರು ನಿಕಟಪೂರ್ವ ಸಮ್ಮೇಳನಾಧ್ಯಕ್ಷರ ನುಡಿಯನ್ನಾಡಲಿದ್ದಾರೆ. ಸಮ್ಮೇಳನದ ಸರ್ವಾಧ್ಯಕ್ಷರಾಗಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಮೇಶಗೌಡ ಪಾಟೀಲ್ ಪಾಲ್ಗೊಳ್ಳಲಿದ್ದಾರೆ. ಇದೇ ವೇಳೆ ಲೇಖಕ ಡಾ.ತಿಪ್ಪೇರುದ್ರ ಸಂಡೂರು ರಚಿಸಿದ ‘ಒಕ್ಕಲಿಗ ಮುದ್ದಣ’ ಹಾಗೂ ಡಾ.ಎಚ್.ತಿಪ್ಪೇಸ್ವಾಮಿ ಮತ್ತು ಡಾ.ರಮೇಶ್ ರಚಿಸಿದ ‘ಸಲ್ಲೇಖನ ಸಮಾಧಿ ಮರಣೋತ್ಸವ’ ಪುಸ್ತಕಗಳು ಲೋಕಾರ್ಪಣೆಗೊಳ್ಳಲಿವೆ ಎಂದರು.

    ಮುಖ್ಯ ಅತಿಥಿಗಳಾಗಿ ಎಂಎಲ್‌ಸಿ ವೈ.ಎಂ.ಸತೀಶ್, ಕಸಾಪ ಅಧ್ಯಕ್ಷ ಡಾ.ಮಹೇಶ ಜೋಷಿ, ಸಂಸದ ವೈ.ದೇವೇಂದ್ರಪ್ಪ, ಗುತ್ತಿಗನೂರು ವಿರುಪಾಕ್ಷಗೌಡ, ಸರ್ವಶೆಟ್ಟಿ ಮಾರುತಿ ಪ್ರಸಾದ್ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ. ಸಮ್ಮೇಳನದಲ್ಲಿ ಮೂರು ಗೋಷ್ಠಿಗಳನ್ನು ಆಯೋಜಿಸಲಾಗಿದ್ದು, ಮೊದಲ ಗೋಷ್ಠಿಯಲ್ಲಿ ‘ಬಳ್ಳಾರಿ ಐತಿಹಾಸಿಕ ಪರಂಪರೆಯ ವೈಶಿಷ್ಟೃ’ ಕುರಿತು ಮತ್ತು ‘ಬಳ್ಳಾರಿ ತಾಲೂಕಿನ ರಂಗಭೂಮಿ ಮತ್ತು ಮಹಿಳೆ’ ವಿಷಯದ ಮೇಲೆ ಗೋಷ್ಠಿ ನಡೆಯಲಿದೆ. ಎರಡನೇ ಗೋಷ್ಠಿಯಲ್ಲಿ ‘ಬಳ್ಳಾರಿ ತಾಲೂಕಿನ ಸಾಹಿತ್ಯ ಅವಲೋಕನ’ ಹಾಗೂ ‘ಕನ್ನಡ ನಾಡು-ನುಡಿ ರಕ್ಷಣೆಯಲ್ಲಿ ಬಳ್ಳಾರಿಯ ಪಾತ್ರ’ ವಿಷಯದ ಮೇಲೆ ಚರ್ಚೆಗಳು ನಡೆಯಲಿವೆ. ಕೊನೆಯಲ್ಲಿ ಕವಿಗೋಷ್ಠಿಯನ್ನು ಆಯೋಜಿಸಲಾಗಿದ್ದು, ಡಾ.ಯು.ಶ್ರೀನಿವಾಸ ಮೂರ್ತಿ, ಲೇಪಾಕ್ಷಿ ಬಿಸಲಹಳ್ಳಿ ಸೇರಿದಂತೆ 20 ಕವಿಗಳು ಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

    ಸಂಜೆ 4.30ಕ್ಕೆ ಸಮ್ಮೇಳನದ ಸಮಾರೋಪ ಸಮಾರಂಭ ನಡೆಯಲಿದೆ. ಇದೇ ವೇಳೆ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನಿಸಲಾಗುತ್ತದೆ. ಸಂಜೆ 6 ಗಂಟೆಗೆ ವಿವಿಧ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ವಿವರಿಸಿದರು. ಕಸಾಪ ಜಿಲ್ಲಾಧ್ಯಕ್ಷ ಡಾ.ನಿಷ್ಠಿ ರುದ್ರಪ್ಪ, ಗೌರವ ಕಾರ್ಯದರ್ಶಿಗಳಾದ ನಜೀರ್ ಪಾಷಾ, ಕಾರ್ತಿಕ್ ಮರಿಸ್ವಾಮಿ ಮಠ, ಪದಾಧಿಕಾರಿಗಳಾದ ಕೆ.ಬಿ.ಅಂಜಿನಿ, ಸಂಗಮೇಶ್ವರ ಟಿ, ಚಾಂದ್‌ಪಾಷಾ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts