ಬರಪೀಡಿತ ತಾಲೂಕುಗಳ ಘೋಷಣೆ ಮಾಡಿ
ಬಳ್ಳಾರಿ: ರಾಜ್ಯ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಬಿಜೆಪಿ ರೈತ ಮೋರ್ಚಾ ಜಿಲ್ಲಾ ಘಟಕದಿಂದ ನಗರದ ನೂತನ ಜಿಲ್ಲಾಡಳಿತ ಭವನದ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಇದನ್ನೂ ಓದಿರಿ: ಅಭಿವೃದ್ಧಿ ಮರೆತ ಕಾಂಗ್ರೆಸ್ ಸರ್ಕಾರ
ಮಾಜಿ ಶಾಸಕ ಸೋಮಶೇಖರ ರೆಡ್ಡಿ ಮಾತನಾಡಿ, ರಾಜ್ಯದಲ್ಲಿ 134 ತಾಲೂಕುಗಳನ್ನು ಬರಗಾಲ ಪೀಡಿತವೆಂದು ಸರ್ಕಾರ ಘೋಷಣೆ ಮಾಡಬೇಕಿತ್ತು. ಆದರೆ ಇದುವರೆಗೂ ಮಾಡಿಲ್ಲ.
ಕೇಂದ್ರ ಸರ್ಕಾರ ನಿಯಮಾವಳಿಗಳ ಬದಲಾವಣೆ ಮಾಡಿದ್ದಾರೆ ಎಂದು ಆರೋಪಿಸಿ ರಾಜ್ಯ ಸರ್ಕಾರ ಬರಗಾಲ ಘೋಷಿಸದೆ ಇರುವುದು ಸರಿಯಲ್ಲ. ಆದಷ್ಟು ಬೇಗ ಬರಪೀಡಿತ ಪ್ರದೇಶಗಳನ್ನು ಘೋಷಿಸಬೇಕು ಎಂದು ಆಗ್ರಹಿಸಿದರು.
ಕಾಂಗ್ರೆಸ್ ಸರ್ಕಾರ ರಚನೆಯಾಗಿ ನೂರು ದಿನ ಪೂರೈಸಲಾಗಿದೆ. ರಾಜ್ಯದಲ್ಲಿ ಕಿಸಾನ್ ಸಮ್ಮಾನ್ ಯೋಜನೆಯಡಿ ರಾಜ್ಯ ಸರ್ಕಾರ ಕೊಡುವ 4 ಸಾವಿರ ರೂ. ನಿಲ್ಲಿಸಲಾಗಿದೆ.
ನೀರಾವರಿ ಯೋಜನೆಗಳನ್ನು ನಿರ್ಲಕ್ಷೃ ಮಾಡಲಾಗಿದೆ. ಎಪಿಎಂಸಿ ಕಾಯ್ದೆಯಿಂದ ಕೈಬಿಟ್ಟಿದ್ದು, ವಿದ್ಯಾಸಿರಿ ಯೋಜನೆ ನಿಲ್ಲಿಸಿದ್ದಾರೆ ಎಂದು ಟೀಕಿಸಿದರು. ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಗುರುಲಿಂಗನಗೌಡ, ನಗರ ಘಟಕದ ಅಧ್ಯಕ್ಷ ಸತ್ಯ ನಾರಾಯಣ, ಎಂಎಲ್ಸಿ ವೈ.ಎಂ.ಸತೀಶ್, ಜಿಲ್ಲಾಧ್ಯಕ್ಷ ಗೋನಾಳ್ ಮುರಹರ ಗೌಡ, ಹಿರಿಯ ಮುಖಂಡರಾದ ಹನುಮಂತಪ್ಪ, ರಾಮಲಿಂಗಪ್ಪ, ತಿಮ್ಮಾರೆಡ್ಡಿ, ರಾಜು, ಮಹಿಪಾಲ್ ಇತರರಿದ್ದರು.