More

    ಬಳ್ಳಾರಿಯಲ್ಲಿ ಏಮ್ಸ್ ಸ್ಥಾಪಿಸುವಂತೆ ಕೇಂದ್ರಕ್ಕೆ ಮನವಿ; ಬಿಜೆಪಿ ಜಿಲ್ಲಾ ವಕ್ತಾರ ಬಿ.ಕೆ.ಸುಂದರ್ ಹೇಳಿಕೆ

    ಬಳ್ಳಾರಿ: ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ವಿಶೇಷ ಯೋಜನೆಗಳ ಘೋಷಣೆಯಾಗಿಲ್ಲ. ಆದರೆ, ನಗರದಲ್ಲಿ ಏಮ್ಸ್ ಆಸ್ಪತ್ರೆ ಸ್ಥಾಪಿಸುವಂತೆ ಕೇಂದ್ರ ಸರ್ಕಾರವನ್ನು ಕೋರಲಾಗಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಡಾ.ಬಿ.ಕೆ.ಸುಂದರ್ ಹೇಳಿದರು.

    ಸುಷ್ಮಾ ಸ್ವರಾಜ್ ಕೇಂದ್ರ ಆರೋಗ್ಯ ಸಚಿವರಾಗಿದ್ದಾಗ ನಗರದಲ್ಲಿ ಏಮ್ಸ್ ಆಸ್ಪತ್ರೆ ಸ್ಥಾಪನೆಯ ಭರವಸೆ ನೀಡಿದ್ದರು. ಆದರೆ, ಇದೀಗ ಹುಬ್ಬಳ್ಳಿಯಲ್ಲಿ ಆಸ್ಪತ್ರೆ ಸ್ಥಾಪಿಸುವ ಪ್ರಯತ್ನಗಳು ನಡೆದಿವೆ. ನಗರದಲ್ಲಿ ಏಮ್ಸ್ ಆಸ್ಪತ್ರೆ ಸ್ಥಾಪನೆಗೆ ಬೇಕಾಗುವ ಮೂಲ ಸೌಕರ್ಯ ಲಭ್ಯ ಇದೆ. ಏಮ್ಸ್ ಆಸ್ಪತ್ರೆ ಸ್ಥಾಪನೆಯಿಂದ ಕರ್ನಾಟಕ ಹಾಗೂ ಆಂಧ್ರಪ್ರದೇಶದ ಜನರಿಗೆ ಆರೋಗ್ಯ ರಕ್ಷಣೆ ಜತೆಗೆ ನಗರದಲ್ಲಿ ಮೂಲ ಸೌಕರ್ಯ ಹೆಚ್ಚಲು ಕಾರಣವಾಗಲಿದೆ ಎಂದು ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

    ಬಿಜೆಪಿ ವಿಭಾಗೀಯ ಪ್ರಭಾರ ಸಿದ್ದೇಶ ಯಾದವ್ ಮಾತನಾಡಿ, ಸಂಕಷ್ಟದ ಕಾಲಘಟ್ಟದಲ್ಲಿ ಕೇಂದ್ರ ಸರ್ಕಾರದ ಬಜೆಟ್ ಮಂಡನೆಯಾಗಿದೆ. ಆದರೂ, 2025ರ ವೇಳೆಗೆ ದೇಶದ ಆರ್ಥಿಕತೆ ಐದು ಟ್ರಿಲಿಯನ್ ಡಾಲರ್ ತಲುಪುವ ವಿಶ್ವಾಸ ಇದೆ. ಆತ್ಮನಿರ್ಭರ ಭಾರತ ಯೋಜನೆ ಮೂಲಕ ದೇಶ ಸ್ವಾವಲಂಬನೆ ಜತೆಗೆ ಉತ್ತಮ ಆರ್ಥಿಕತೆ ಸಾಧಿಸಲಿದೆ ಎಂದು ಹೇಳಿದರು.

    ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ ಮೋತ್ಕರ್, ಅನಿಲ್ ನಾಯ್ಡು, ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಗುತ್ತಿಗನೂರು ವಿರೂಪಾಕ್ಷಗೌಡ, ಜಿಪಂ ಮಾಜಿ ಉಪಾಧ್ಯಕ್ಷ ಕೆ.ಎ.ರಾಮಲಿಂಗಪ್ಪ, ಮುಖಂಡರಾದ ವೈ.ತಿಮ್ಮಾರೆಡ್ಡಿ, ಕೃಷ್ಣಾರೆಡ್ಡಿ, ಸುಬ್ಬರಾವ್ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts