ಜಿಪಂ ಸ್ಥಾಯಿ ಸಮಿತಿಗೆ 14ರಂದು ಚುನಾವಣೆ

ಬಳ್ಳಾರಿ: ಜಿಪಂನ ವಿವಿಧ ಸ್ಥಾಯಿ ಸಮಿತಿಗಳಿಗೆ ಮೇ 14ರಂದು ಚುನಾವಣೆ ನಿಗದಿಯಾಗಿದೆ. ಜಿಪಂ ಸ್ಥಾಯಿ ಸಮಿತಿಗಳ ಸದಸ್ಯರ ಅವಧಿ ಮೇ 13ರಂದು ಮುಕ್ತಾಯವಾಗಲಿದೆ. ಈ ಹಿನ್ನೆಲೆಯಲ್ಲಿ ಸ್ಥಾಯಿ ಸಮಿತಿಗಳ 2ನೇ ಅವಧಿ ಸದಸ್ಯತ್ವಕ್ಕೆ ಚುನಾವಣೆ ನಡೆಸಲಾಗುತ್ತಿದೆ. ಸಾಮಾನ್ಯ ಸ್ಥಾಯಿ ಸಮಿತಿಯ 6, ಹಣಕಾಸು, ಲೆಕ್ಕಪರಿಶೋಧನೆ ಮತ್ತು ಯೋಜನಾ ಸಮಿತಿಯ 6, ಸಾಮಾಜಿಕ ನ್ಯಾಯ ಸಮಿತಿಯ 7 (ತಲಾ 1 ಸ್ಥಾನ ಮಹಿಳೆ ಮತ್ತು ಅನುಸೂಚಿತ ಜಾತಿಯ ಸದಸ್ಯರು), ಶಿಕ್ಷಣ ಮತ್ತು ಆರೋಗ್ಯ ಸಮಿತಿಯ 7, ಕೃಷಿ ಮತ್ತು ಕೈಗಾರಿಕಾ ಸಮಿತಿಯ 7 ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಸಾಮಾನ್ಯ ಸ್ಥಾಯಿ ಸಮಿತಿಗೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ, ಹಣಕಾಸು ಲೆಕ್ಕ ಪರಿಶೋಧನೆ ಮತ್ತು ಯೋಜನಾ ಸಮಿತಿಗೆ ಜಿಪಂ ಉಪಕಾರ್ಯದರ್ಶಿಗೆ (ಅಭಿವೃದ್ಧಿ), ಸಾಮಾಜಿಕ ನ್ಯಾಯ ಸಮಿತಿಗೆ ಜಿಪಂ ಮುಖ್ಯ ಲೆಕ್ಕಾಧಿಕಾರಿಗೆ, ಶಿಕ್ಷಣ ಮತ್ತು ಆರೋಗ್ಯ ಸಮಿತಿಗೆ ಜಿಪಂ ಮುಖ್ಯ ಯೋಜನಾಧಿಕಾರಿಗೆ ಮತ್ತು ಕೃಷಿ ಮತ್ತು ಕೈಗಾರಿಕಾ ಸಮಿತಿಗೆ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರಿಗೆ ನಾಮಪತ್ರ ಸಲ್ಲಿಸಬೇಕು.

ಮೇ 14ರಂದು ಮಧ್ಯಾಹ್ನ 12ರೊಳಗೆ ನಾಮಪತ್ರ ಸ್ವೀಕರಿಸಲಾಗುತ್ತದೆ. ಅಂದು ಮಧ್ಯಾಹ್ನ 1.30ಕ್ಕೆ ಪರಿಶೀಲನೆ ನಡೆಯಲಿದ್ದು ಇದೇ ಅವಧಿಯಲ್ಲಿ ನಾಮಪತ್ರ ಹಿಂಪಡೆಯಬಹುದಾಗಿದೆ. ಅವಶ್ಯಕತೆ ಇದ್ದರೆ ಮೇ 14ರಂದು ಮಧ್ಯಾಹ್ನ 2ರಿಂದ 3.30ರವರೆಗೆ ಮತದಾನ ನಡೆಯಲಿದೆ. ಅಂದು ಸಂಜೆ 4ರಿಂದ ಮತ ಏಣಿಕೆ ನಡೆಯಲಿದೆ ಎಂದು ಜಿಪಂ ಸಿಇಒ ಕೆ.ನಿತೀಶ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *