26.8 C
Bangalore
Friday, December 13, 2019

ಹದಗೆಟ್ಟಿದೆ ಬಾಳೆಹಿತ್ಲು ಕೂಡು ರಸ್ತೆ

Latest News

ಶಬರಿಮಲೆ ವಿಚಾರದಲ್ಲಿ ಸದ್ಯ ಯಾವುದೇ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್​

ನವದೆಹಲಿ: ಪೊಲೀಸ್​ ರಕ್ಷಣೆಯೊಂದಿಗೆ ಶಬರಿಮಲೆ ಅಯ್ಯಪ್ಪನ ಸನ್ನಿಧಿಯನ್ನು ಮಹಿಳೆಯರು ಸುರಕ್ಷಿತವಾಗಿ ಪ್ರವೇಶಿಸಲು ಕೇರಳ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಇಬ್ಬರು ಮಹಿಳಾ ಕಾರ್ಯಕರ್ತರು ಸಲ್ಲಿಸಿದ್ದ...

ತುಮಕೂರು ಸ್ಮಾರ್ಟ್‌ಸಿಟಿ ಜೆಎಂಡಿ ಎತ್ತಂಗಡಿ!

ತುಮಕೂರು: ಸ್ಮಾರ್ಟ್‌ಸಿಟಿ ಲಿಮಿಟೆಡ್ ಜಂಟಿ ವ್ಯವಸ್ಥಾಪಕ ನಿರ್ದೇಶಕ ವಿ.ಅಜಯ್ ಅವರನ್ನು ಎತ್ತಂಗಡಿ ಮಾಡಲಾಗಿದೆ. 3 ತಿಂಗಳ ಹಿಂದೇ ಸ್ಮಾರ್ಟ್‌ಸಿಟಿ ಎಂಡಿ ಜವಾಬ್ದಾರಿ ಹೊಣೆ ಹೊತ್ತಿದ್ದ ಮಹಾನಗರ...

ಕುಪ್ಪೂರು ಶ್ರೀ ಮರುಳಸಿದ್ದೇಶ್ವರ ಜಾತ್ರೆಗೆ ಸಿಎಂ ಯಡಿಯೂರಪ್ಪ ಚಾಲನೆ

ಚಿಕ್ಕನಾಯಕನಹಳ್ಳಿ: ಸುಕ್ಷೇತ್ರ ಕುಪ್ಪೂರು ಶ್ರೀಮರುಳಸಿದ್ದೇಶ್ವರ ಗದ್ದುಗೆ ಜಾತ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದ್ದು, ನಾಡಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಜಾತ್ರೆಗೆ ಬಂದಿದ್ದರು. ಶ್ರೀಮಠದ ಆವರಣದಲ್ಲಿ ಗುರುವಾರ...

ಬಲರಾಮ್ ಕುಣಿಗಲ್ ಬಿಜೆಪಿ ಅಧ್ಯಕ್ಷ

ಕುಣಿಗಲ್: ತಾಲೂಕು ಬಿಜೆಪಿ ನೂತನ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಮ್ ಗುರುವಾರ ಅವಿರೋಧ ಆಯ್ಕೆಯಾದರು. ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ರಾಜ್ಯ ಬಿಜೆಪಿ...

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು. ಪಾರ್ವತಮ್ಮ...

ಹರಿಪ್ರಸಾದ್ ನಂದಳಿಕೆ ಬೆಳ್ಮಣ್
ನಿಟ್ಟೆ ಗ್ರಾಮದ ಬಜಕಳದಿಂದ ಹಾಳೆಕಟ್ಟೆ ಮಾರ್ಗವಾಗಿ ಕಲ್ಯಾ ಗ್ರಾಮ ಸಂಪರ್ಕಿಸುವ ಬಾಳೆಹಿತ್ಲು ಕೂಡು ರಸ್ತೆ ಸಂಪೂರ್ಣ ಹದಗೆಟ್ಟಿದ್ದು ರಸ್ತೆಯುದ್ದಕ್ಕೂ ಬೃಹತ್ ಗಾತ್ರದ ಹೊಂಡಗಳು ಸೃಷ್ಟಿಯಾಗಿದ್ದು ವಾಹನ ಸಂಚಾರ ದುಸ್ತರವಾಗಿದೆ. ಹಲವು ವರ್ಷಗಳಿಂದ ಹೊಂಡ ಗುಂಡಿಗಳಿರುವ ರಸ್ತೆಯಲ್ಲೇ ಜನರು ಸಂಚಾರ ಮಾಡುತ್ತಲೇ ಸುಸ್ತಾಗಿದ್ದಾರೆ. ಡಾಂಬರು ರಸ್ತೆಯಾದರೂ ಜಲ್ಲಿ ಕಲ್ಲುಗಳು ಎದ್ದು ಚೆಲ್ಲಾಪಿಲ್ಲಿಯಾಗಿದ್ದು ಮಣ್ಣಿನ ರಸ್ತೆಯಂತಾಗಿದೆ. ವಾಹನ ಸವಾರರು ರಸ್ತೆಯಲ್ಲಿ ಸಂಚರಿಸಲು ಹರ ಸಾಹಸ ಪಡಬೇಕಾಗಿದೆ. ಈ ಭಾಗದಲ್ಲಿ ಕ್ರಶರ್‌ಗಳು ಕಾರ್ಯನಿರ್ವಹಿಸುತ್ತಿದ್ದು ದೊಡ್ಡ ವಾಹನಗಳ ಓಡಾಟ ಹೆಚ್ಚಾಗಿದೆ. ಪರಿಣಾಮ ರಸ್ತೆಯಲ್ಲಿ ಬೃಹತ್ ಗಾತ್ರದ ಹೊಂಡಗಳು ನಿರ್ಮಾಣಗೊಂಡಿವೆ. ಪ್ರಸ್ತುತ ಇಲ್ಲಿ ಸಣ್ಣಪುಟ್ಟ ವಾಹನಗಳು ಓಡಾಡುವುದೇ ಕಷ್ಟವಾಗಿದ್ದು ಜನ ಹಿಡಿಶಾಪ ಹಾಕುತ್ತಿದ್ದಾರೆ. ಕಲ್ಯಾ ಗ್ರಾಮಸ್ಥರು ನಿಟ್ಟೆ ಆರೋಗ್ಯ ಕೇಂದ್ರ ತಲುಪಲು ಹಾಳೆಕಟ್ಟೆ ಮಾರ್ಗ ಬಹು ಹತ್ತಿರದ ದಾರಿಯಾಗಿದ್ದು, ಹೆಚ್ಚಿನ ಜನರು ಇದೇ ಮಾರ್ಗ ಅವಲಂಬಿಸಿದ್ದಾರೆ.

30 ವರ್ಷಗಳಿಂದ ಡಾಂಬರು ಕಂಡಿಲ್ಲ: ಕಲ್ಯಾ ಗ್ರಾಮಸ್ಥರು ಬಾಳೆಹಿತ್ಲು ಮೂಲಕ ಬಜಕಳ ಮಾರ್ಗವಾಗಿ ಕಾರ್ಕಳಕ್ಕೆ ತೆರಳಲೂ ಹತ್ತಿರದ ರಸ್ತೆ ಇದು. ರಸ್ತೆಯೂ ಹದಗೆಟ್ಟ ಪರಿಣಾಮ ಕಲ್ಯಾ ಗ್ರಾಮದಿಂದ ನಿಟ್ಟೆ ಬಜಕಳವರೆಗಿನ 4ರಿಂದ 5 ಕಿ.ಮೀ ಉದ್ದದ ಈ ರಸ್ತೆಯಲ್ಲಿ ವಾಹನಗಳು ಸಂಚರಿಸಲು ಕಷ್ಟ ಪಡುವಂತಾಗಿದೆ. ಕಳೆದ 30 ವರ್ಷಗಳಿಂದ ಈರಸ್ತೆ ಡಾಂಬರು ಭಾಗ್ಯ ಕಂಡಿಲ್ಲ. ಕಲ್ಯಾ ಹಾಗೂ ನಿಟ್ಟೆ ಗ್ರಾಪಂ ವ್ಯಾಪ್ತಿಯಲ್ಲಿ ಈ ರಸ್ತೆ ಬರುವುದರಿಂದ ರಸ್ತೆ ನಿರ್ವಹಣೆ ಯಾವ ಗ್ರಾಪಂಗೆ ಸೇರಿದ್ದೆಂಬ ವಿವಾದವೇ ರಸ್ತೆ ಸಂಪೂರ್ಣ ಹದಗೆಡಲು ಕಾರಣ ಎನ್ನಲಾಗಿದೆ. ಹಾಳೆಕಟ್ಟೆಯಿಂದ ನಿಟ್ಟೆವರೆಗೂ ಈ ರಸ್ತೆ ಹದಗೆಟ್ಟಿದ್ದು ವಾಹನ ಸವಾರರಂತೂ ದಿನನಿತ್ಯ ಇಲ್ಲಿ ಎಡವಟ್ಟು ಮಾಡಿಕೊಳ್ಳುತ್ತಿದ್ದು ಬೈಕ್ ಸವಾರರಿಗೆ ಈ ರಸ್ತೆ ಅಪಾಯಕಾರಿ.

ರಸ್ತೆ ಸ್ಥಿತಿ ಕುರಿತು ಸ್ಥಳೀಯ ಮಂಜುನಾಥ ಶೆಟ್ಟಿ 2016ರಲ್ಲಿ ಪ್ರಧಾನಿ ಕಚೇರಿಗೆ ಪತ್ರ ಬರೆದಿದ್ದು, ನಾಲ್ಕು ತಿಂಗಳ ಬಳಿಕ ಪತ್ರಕ್ಕೆ ಉತ್ತರ ಬಂದಿದೆಯಾದರೂ ರಸ್ತೆಗೆ ಡಾಂಬರು ಹಾಕಿಸುವಲ್ಲಿ ಅಧಿಕಾರಿಗಳು ಯಾವುದೇ ಆಸಕ್ತಿ ತೋರಿಲ್ಲ. ಸಂಪೂರ್ಣ ಹೊಂಡ ಗುಂಡಿಗಳಿಂದ ಕೆಸರುಮಯ ರಸ್ತೆಯಲ್ಲೇ ಸಂಚರಿಸಲು ಜನ ನಿತ್ಯ ನರಕಯಾತನೆ ಪಡುವಂತಾಗಿದೆ. ಪ್ರಸ್ತುತ ಮಳೆಯಿಂದ ರಸ್ತೆ ಕೆಸರುಮಯವಾಗಿ ಶಾಲಾ ವಿದ್ಯಾರ್ಥಿಗಳು ಹಾಗೂ ನಿತ್ಯ ಕೆಲಸಗಳಿಗೆ ಸಂಚರಿಸುವ ಸ್ಥಳೀಯರು ಶಾಪ ಹಾಕುವಂತಾಗಿದೆ.

ನಿಟ್ಟೆ ಗ್ರಾಮದ ಬಜಕಳದಿಂದ ಹಾಳೆಕಟ್ಟೆ ಮಾರ್ಗವಾಗಿ ಕಲ್ಯಾ ಗ್ರಾಮ ಸಂಪರ್ಕಿಸುವ ಬಾಳೆಹಿತ್ಲು ಕೂಡುರಸ್ತೆ ರಸ್ತೆ ಸಂಪೂರ್ಣ ಹದಗೆಟ್ಟದ್ದು ವಾಹನ ಸಂಚಾರ ಕಷ್ಟವಾಗಿದೆ. ಈ ಬಗ್ಗೆ ಹಲವು ಬಾರಿ ಸಂಬಂಧಿತ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ.
-ಶೇಖರ ಆಚಾರ್ಯ, ಸ್ಥಳೀಯ ನಿವಾಸಿ

ಚುನಾವಣೆ ಸಂದರ್ಭ ಈ ಬಾರಿ ರಸ್ತೆ ದುರಸ್ತಿ ಆಗುತ್ತದೆ ಎಂಬ ಆಶ್ವಾಸನೆ ನೀಡುತ್ತಾರೆಯೇ ವಿನಾ ಗೆದ್ದ ಮೇಲೆ ಯಾವುದೇ ಕ್ರಮ ಇಲ್ಲಿವರೆಗೆ ಕೈಗೊಂಡಿಲ್ಲ.
-ಧೀರಜ್, ಗ್ರಾಮಸ್ಥ

ಬಹುಬೇಡಿಕೆಯ ಹಾಳೆಕಟ್ಟೆ -ಬಜಕಳ ಸಂಪರ್ಕ ರಸ್ತೆಯ ಎರಡು ಕಿ.ಮೀ ರಸ್ತೆಗೆ ಶಾಸಕರ ವಿಶೇಷ ಮುತುವರ್ಜಿಯಲ್ಲಿ ರೂ. 50 ಲಕ್ಷ ಅನುದಾನ ಮಂಜೂರಾಗಿದೆ. ಪ್ರಸಕ್ತ ಸರ್ವೇಕಾರ್ಯ ಮುಗಿದಿದೆ. ಮಳೆಗಾಲ ಕಳೆದ ತಕ್ಷಣ ಡಾಂಬರು ಹಾಕಲಾಗುವುದು.
-ಸುಮಿತ್ ಶೆಟ್ಟಿ, ಜಿಲ್ಲಾ ಪಂಚಾಯಿತಿ ಸದಸ್ಯ

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....