20.4 C
Bengaluru
Sunday, January 19, 2020

ಮನೆಯವರು ಬೇಡ ಎಂದರೂ ಕಾಲಿಲ್ಲದವನ ವರಿಸಿದ್ದು ಏಕೆ; ಇಲ್ಲಿದೆ ಮನಮಿಡಿಯುವ ಮದುವೆ ಸುದ್ದಿ !

Latest News

ಕೊಹ್ಲಿ ಟೀಕಿಸುವ ಭರದಲ್ಲಿ ಅನುಷ್ಕಾ ಎಳೆತಂದು ಕೆಟ್ಟದಾಗಿ ಟ್ವೀಟ್​ ಮಾಡಿದ ಲೇಖಕಿಗೆ ಟ್ವಿಟ್ಟಿಗರ ಟೀಕಾಸ್ತ್ರ!

ನವದೆಹಲಿ: ಹತ್ತು ವಿಕೆಟ್​ ಅಂತರದಲ್ಲಿ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಟೀಮ್​ ಇಂಡಿಯಾ ಮೊದಲ ಏಕದಿನ ಪಂದ್ಯ ಸೋತ ಬೆನ್ನಲ್ಲೇ ನಾಯಕ ವಿರಾಟ್​ ಕೊಹ್ಲಿಯ...

ನಮ್ಮಲ್ಲಿದೆ ಚಾರಿತ್ರಿಕ ಪುರುಷರ ಪೂಜಿಸುವ ಪಂಥ

ಮೈಸೂರು: ಮಲೆ ಮಹದೇಶ್ವರ, ಮಂಟೇಸ್ವಾಮಿ, ಸಿದ್ದಪ್ಪಾಜಿ ಅವರೆಲ್ಲಾ ಚಾರಿತ್ರಿಕ ಪುರುಷರಾದರೂ ಅದಕ್ಕೆ ಪುರಾಣದ ಪರಿಕಲ್ಪನೆ ನೀಡಿ ಅವರನ್ನು ದೇವರನ್ನಾಗಿ ಪೂಜಿಸುವ ಭಕ್ತಪಂಥವೇ ನಮ್ಮಲ್ಲಿದೆ...

ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟಕ್ಕೆ ಮೇಯರ್ ಪಟ್ಟ

ಮೈಸೂರು: ನಗರಪಾಲಿಕೆ ಮೇಯರ್, ಉಪ ಮೇಯರ್ ಸ್ಥಾನ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟಕ್ಕೆ ಒಲಿದಿದ್ದು, ಮೇಯರ್ ಆಗಿ ತಸ್ನಿಂ, ಉಪ ಮೇಯರ್ ಆಗಿ ಸಿ.ಶ್ರೀಧರ್ ಆಯ್ಕೆಯಾದರು. ಪಾಲಿಕೆ...

ಸಿಎಎ, ಎನ್‌ಆರ್‌ಸಿ ವಿರೋಧಿಸಿ ಪ್ರತಿಭಟನೆ

ಮೈಸೂರು: ಪೌರತ್ವ ತಿದ್ದುಪಡಿ ಮಸೂದೆ(ಸಿಎಎ), ರಾಷ್ಟ್ರೀಯ ಪೌರತ್ವ ನೋಂದಣಿ(ಎನ್‌ಆರ್‌ಸಿ) ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ವಿರೋಧಿಸಿ ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಯಿತು. ಬನ್ನಿಮಂಟಪ...

ಗಮನ ಸೆಳೆದ ಸೈಕ್ಲೋಥಾನ್, ಮ್ಯಾರಥಾನ್

ಮೈಸೂರು: ಯುವಜನರ ದೈಹಿಕ ದಕ್ಷತೆ ಹಾಗೂ ಉತ್ತಮ ಆರೋಗ್ಯಕ್ಕಾಗಿ ಫಿಟ್ ಇಂಡಿಯಾ ಅಭಿಯಾನದಡಿ ಶನಿವಾರ ಸೈಕ್ಲೋಥಾನ್ ಮತ್ತು ಮ್ಯಾರಥಾನ್ ನಡೆಯಿತು. ನೆಹರು ಯುವಕೇಂದ್ರ, ಯುವ...

ಬೆಳ್ತಂಗಡಿ: ಮನೆಯವರು ಬೇಡ ಎಂದರೂ ಕಾಲು ಕಳೆದುಕೊಂಡ ಹುಡುಗನನ್ನು ವರಿಸುವ ಮೂಲಕ ಇಲ್ಲೊಬ್ಬ ಹುಡುಗಿ ಸುದ್ದಿಯಾಗಿದ್ದಾಳೆ. ಇದು ನಡೆದಿರುವುದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಾಯರ್ತಡ್ಕ ಎಂಬಲ್ಲಿ.

ಯುವಕನಲ್ಲಿ ಯಾವುದೇ ಊನ ಇದ್ದರೆ, ಹುಡುಗ ಬಡವನಾದಲ್ಲಿ ಈಗಿನ ಹುಡುಗಿಯರು ಮದುವೆಗೆ ನಿರಾಕರಿಸುತ್ತಾರೆ. ಮನೆಯವರು ಸಂಬಂಧವೇ ಬೇಡ ಎನ್ನುತ್ತಾರೆ. ಇಂತಹ ಸಂದರ್ಭದಲ್ಲಿ ಈ ಹುಡುಗಿಯ ನಿರ್ಧಾರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಯುವಕ ಚಂದ್ರಶೇಖರನಿಗೆ ಕಾರ್ಕಳ ತಾಲೂಕಿನ ಮಾಳ ಗ್ರಾಮದ ಸಂಜೀವಿನಿ ಎಂಬ ಹುಡುಗಿ ಜತೆ ವರ್ಷದ ಹಿಂದೆ ಮದುವೆ ನಿಶ್ಚಯವಾಗಿತ್ತು. ಟ್ಯಾಂಕರ್ ಕ್ಲೀನರ್ ಆಗಿದ್ದ ಚಂದ್ರಶೇಖರ್ ಅಂಕೋಲಾದಲ್ಲಿ ನಡೆದ ಅಪಘಾತದಲ್ಲಿ ತೀವ್ರ ಗಾಯಗೊಂಡು ಒಂದು ಕಾಲನ್ನೇ ಕಳಕೊಳ್ಳುವಂತಾಗಿತ್ತು.

ಈ ಘಟನೆಯಿಂದ ಹುಡುಗಿ ಮನೆಯವರು ಮದುವೆಗೆ ನಿರಾಕರಿಸಿದರು. ತೀರಾ ಬಡತನದಲ್ಲಿದ್ದ ಹುಡುಗ ಮತ್ತು ವೃದ್ಧೆ ತಾಯಿ ನೊಂದುಕೊಂಡಿದ್ದರು. ಇದೇ ವೇಳೆ ಹುಡುಗಿ ಸಂಜೀವಿನಿ ಅಂಗವಿಕಲ ಹುಡುಗನನ್ನು ವರಿಸಲು ಒಪ್ಪಿದ್ದಲ್ಲದೆ, ಹಿಂದು ಸಂಘಟನೆಗಳ ಸಹಾಯ ಯಾಚಿಸಿದ್ದಾಳೆ. ಹುಡುಗಿಯ ಮಾನವೀಯ ನಡೆಯನ್ನು ಮೆಚ್ಚಿದ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳದ ನಾಯಕರು ಮುಂದೆ ನಿಂತು ಅದ್ದೂರಿಯಾಗಿ ಮದುವೆ ನೆರವೇರಿಸಿದ್ದಾರೆ.

ಕಾಯರ್ತಡ್ಕದ ಉಮಾಮಹೇಶ್ವರ ದೇವಸ್ಥಾನದಲ್ಲಿ ಭಾನುವಾರ ಮದುವೆ ನಡೆದಿದ್ದು ಸ್ವಾಮೀಜಿಗಳು, ಧಾರ್ಮಿಕ ಮುಖಂಡರನ್ನು ಸೇರಿಸಿ ಸಮಾಜೋತ್ಸವ ರೂಪದಲ್ಲಿ ನಡೆದ ಮದುವೆಯಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನರಿಗೆ ಊಟ ಹಾಕಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...