More

    ಜೂನ್ 1ರಿಂದ ಭಕ್ತರಿಗೆ ಧರ್ಮಸ್ಥಳ ಮಂಜುನಾಥನ ದರ್ಶನಭಾಗ್ಯ

    ಬೆಂಗಳೂರು/ಬೆಳ್ತಂಗಡಿ: ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕೆ ಜೂನ್ 1ರಿಂದ ಅವಕಾಶ ನೀಡಲು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ನಿರ್ಧರಿಸಿದ್ದಾರೆ. ಈ ವಿಷಯವನ್ನು ಬೆಂಗಳೂರಿನಲ್ಲಿ ಗುರುವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಖಚಿತಪಡಿಸಿದ್ದಾರೆ.

    ಇದನ್ನೂ ಓದಿ: ಸಾಮಾಜಿಕ ಜಾಲತಾಣ ವೇದಿಕೆಗಳಿಗೆ ಬೆದರಿಕೆಯೊಡ್ಡಿದ ಡೊನಾಲ್ಡ್ ಟ್ರಂಪ್​…!

    ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 1ಗಂಟೆಯವರೆಗೆ ಮತ್ತು ಸಂಜೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ದೇವರ ದರ್ಶನಕ್ಕೆ ಅವಕಾಶ ಇರಲಿದೆ ಎಂದು ನಂತರ ದೇವಸ್ಥಾನದ ವತಿಯಿಂದ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

    ಆದರೆ ಆಗಮಿಸುವ ಭಕ್ತರಿಗೆ ವಸತಿಗೆ ಅವಕಾಶ ಕಲ್ಪಿಸಬೇಕೇ ಬೇಡವೇ ಎಂಬ ಬಗ್ಗೆ ಇನ್ನೂ ತೀರ್ಮಾನ ಕೈಗೊಂಡಿಲ್ಲ. ಸರತಿ ಸಾಲಿನಲ್ಲಿ ದೇವರ ದರ್ಶನಕ್ಕೆ ಮಾತ್ರ ಸದ್ಯಕ್ಕೆ ಅವಕಾಶ ನೀಡಲು ನಿರ್ಧರಿಸಲಾಗಿದೆ.

    ಇದನ್ನೂ ಓದಿ: ಸಾವರ್ಕರ್ ಹೆಸರಿನ ವಿವಾದ: ಮೇಲ್ಸೇತುವೆ ಉದ್ಘಾಟನೆಯೇ ಮುಂದೂಡಿಕೆ!

    ಈ ಸಂದರ್ಭದಲ್ಲಿ ಕರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಎಲ್ಲ ನಿಯಮಗಳನ್ನು ಪಾಲಿಸಲು ದೇವಸ್ಥಾನದ ಸಿಬ್ಬಂದಿ ಮತ್ತು ಭಕ್ತ ಸಮೂಹಕ್ಕೆ ಸೂಚಿಸಲಾಗುವುದು. ಮಾಸ್ಕ್ ಧರಿಸಿಕೊಳ್ಳುವುದು, ಸ್ಯಾನಿಟೈಸರ್ ಬಳಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಮುಂತಾದ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

    ಕೇವಲ 360 ರೂಪಾಯಿಗೆ ಒಂದು ಟನ್ ಮರಳು…!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts