ಟಿಪ್ಪರ್ ಹರಿದು ಗ್ರಾ.ಪಂ.ಅಧ್ಯಕ್ಷೆ ಸಾವು

blank

ಬೇಲೂರು : ಪಟ್ಟಣದ ಮುಖ್ಯ ರಸ್ತೆಯಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಟಿಪ್ಪರ್ ಹರಿದು ಹನಿಕೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಲ್ಲಿಗೆಮ್ಮ (60) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಳಗ್ಗೆ ದಿನಸಿ ಪದಾರ್ಥ ಖರೀದಿಸಲು ಬೈಕ್‌ನಲ್ಲಿ ಪತಿ ಜತೆ ಮಲ್ಲಿಗೆಮ್ಮ ಪಟ್ಟಣದ ಮುಖ್ಯರಸ್ತೆಯಲ್ಲಿ ಹೋಗುತ್ತಿದ್ದರು. ಈ ವೇಳೆ ಬೈಕ್‌ಗೆ ಟಿಪ್ಪರ್ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್‌ನ ಹಿಂಬದಿ ಕುಳಿತ್ತಿದ್ದ ಮಲ್ಲಿಗೆಮ್ಮ ರಸ್ತೆಗೆ ಬಿದ್ದಿದ್ದಾರೆ. ಅಷ್ಟರಲ್ಲಿ ಟಿಪ್ಪರ್ ಲಾರಿಯ ಹಿಂಬದಿಯ ಚಕ್ರ ಮಲ್ಲೆಗೆಮ್ಮನವರ ಮೈಮೇಲೆ ಹರಿದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಮಲ್ಲಿಗೆಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತಕ್ಕೆ ಕಾರಣವಾದ ಟಿಪ್ಪರ್ ಲಾರಿ ಹಾಗೂ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮೃತದೇಹದ ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿ ತನಿಖೆ ಕೈಗೊಂಡಿದ್ದಾರೆ.
ಅಪಘಾತ ನಡೆದ ರಸ್ತೆಯ ಎರಡೂ ಬದಿಯಲ್ಲೂ ವಾಹನಗಳು ನಿಂತಿದ್ದರಿಂದ ದಟ್ಟಣೆ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುವಂತಾಯಿತು.

Share This Article

1 ರೂ. ಖರ್ಚು ಮಾಡದೆ ನಿಮ್ಮ ಕೂದಲು ದಪ್ಪವಾಗಿ, ಸೊಂಪಾಗಿ ಬೆಳೆಯಲು ಏನು ಮಾಡಬೇಕೆಂದು ನಿಮಗೆ ತಿಳಿದಿದೆಯೇ? Hair Tips

Hair Tips: ಇತ್ತೀಚಿನ ದಿನಗಳಲ್ಲಿ ಕೂದಲು ಉದುರುವುದು ಒಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಕೂದಲು ಉದುರುವುದನ್ನು…

ಬೇಸಿಗೆಯಲ್ಲಿ ರಾತ್ರಿ ಪ್ರಯಾಣಿಸುತ್ತಿದ್ದೀರಾ? ಈ ವಿಷಯ ನೆನಪಿರಲಿ… traveling at night

traveling at night : ರಾತ್ರಿಯಲ್ಲಿ  ಹೆಚ್ಚಿನ ರಸ್ತೆಗಳು ಖಾಲಿಯಾಗಿರುತ್ತವೆ, ಸಂಚಾರ ಕಡಿಮೆ ಇರುತ್ತದೆ ಮತ್ತು ಪ್ರಯಾಣವನ್ನು…

ಮಾರ್ಚ್​ 29ರಂದು ಷಷ್ಠ ಗ್ರಹ ಕೂಟ… ಅಪ್ಪಿತಪ್ಪಿಯೂ ಆ ದಿನ ಈ ತಪ್ಪುಗಳನ್ನು ಮಾಡಬೇಡಿ! Shasta Graha Koota

Shasta Graha Koota : ಮಾರ್ಚ್ 29ರಂದು ಸೂರ್ಯಗ್ರಹಣ ಸಂಭವಿಸಲಿದೆ. ಅದೇ ದಿನ ಷಷ್ಠ ಗ್ರಹ…