20.4 C
Bengaluru
Sunday, January 19, 2020

ಬೇಲೂರಿನಲ್ಲಿ ನಮ್ಮ ನಡಿಗೆ ಕಲೆಗಳ ಕಡೆಗೆ

Latest News

ಎಲ್ಲರ ಬಾಯಿಗೆ ಬೀಗ ಹಾಕಿದ ಅಮಿತ್ ಷಾ

ಹುಬ್ಬಳ್ಳಿ: ರಾತ್ರಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡಿದ ಅಮಿತ್ ಷಾ, ಪಕ್ಷದ ಧಾರವಾಡ, ಹಾವೇರಿ, ಗದಗ ಜಿಲ್ಲೆಯ ಪದಾಧಿಕಾರಿಗಳೊಂದಿಗೆ ರಾತ್ರಿಯ ಭೋಜನ ಸವಿದರು.

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ಬೇಲೂರು: ಸಂಸ್ಕಾರ ಭಾರತಿ ಸಂಸ್ಥೆಯಿಂದ ಪದ್ಮಶ್ರೀ ಡಾ.ವಿಷ್ಣು ಶ್ರಿಧರ ವಾಕಣಕರ್ ಜನ್ಮಶತಮಾನೋತ್ಸವ ವರ್ಷದ ಅಂಗವಾಗಿ ಶನಿವಾರ ಪಟ್ಟಣದಲ್ಲಿ ನಮ್ಮ ನಡಿಗೆ ಕಲೆಗಳ ಕಡೆಗೆ(ಹೆರಿಟೇಜ್ ವಾಕ್) ಕಾರ್ಯಕ್ರಮ ಆಯೋಜಿಸಲಾಗಿತ್ತು.
ಚನ್ನಕೇಶವಸ್ವಾಮಿ ದೇಗುಲ ಆವರಣದಲ್ಲಿ ಆಗ್ರಾದ ಸಂಸ್ಕಾರ ಭಾರತಿ ಸಂಸ್ಥೆಯ ಶ್ರೀಬಾಬಾ ಯೋಗೀಂದ್ರ ಜೀ ನಡಿಗೆಗೆ ಚಾಲನೆ ನೀಡಿದರು. ಸಾಹಿತಿ ಶ್ರೀವತ್ಸ ಎಸ್.ವಟಿ ಅವರು ಜಿಲ್ಲೆ ಹಾಗೂ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಸಾಹಿತ್ಯಾಸಕ್ತರಿಗೆ ಹಾಗೂ ಕಲಾವಿದರಿಗೆ ಮೆರವಣಿಗೆಯಲ್ಲಿ ಬೇಲೂರು ಇತಿಹಾಸದ ಪರಂಪರೆಗಳನ್ನು ಸಾರುವ ಚನ್ನಕೇಶವ ದೇಗುಲ, ಶಂಕರಮಠ, ಬಯಲು ರಂಗ ಮಂದಿರ, ಅಂಜನೇಯ ದೇಗುಲ, ಕೆರೆ ಬೀದಿಯ ಇತಿಹಾಸ, ಕೋಟೆಯ ಅವಶೇಷಗಳು, ವಿಷ್ಣು ಸಮುದ್ರ ಕೆರೆ, ತೆಪ್ಪದ ಕೊಳ, ಅಮೃತೇಶ್ವರ ದೇಗುಲ, ಪಾತಾಳೇಶ್ವರ ದೇಗುಲ, ವೀರಾಂಜನೇಯ ದೇಗುಲ ಹಾಗೂ ನೂರು ವರ್ಷ ತುಂಬಿದ ಪ್ರೇಮರಿ ಶಾಲೆ, ಗಣಪತಿ ದೇಗುಲ, ನಂಜುಂಡೇಶ್ವರ ದೇಗುಲ, ಚನ್ನಕೇಶವ ರಥದ ಇತಿಹಾಸ, ಶಂಕರಲಿಂಗೇಶ್ವರ ದೇಗುಲ ಸೇರಿದಂತೆ ಪರಂಪರೆಯ ತಾಣಗಳನ್ನು ಪರಿಚಯಿಸಿದರು. ಭಾರತಾಂಬೆ ಹಾಗೂ ಪದ್ಮಶ್ರೀ ಡಾ.ವಿಷ್ಣು ಶ್ರೀಧರ ವಾಕಣಕರ್ ಭಾವಚಿತ್ರವನ್ನು ಮೆರವಣಿಗೆ ಮಾಡಲಾಯಿತು. ಮೆರವಣಿಗೆ ಚನ್ನಕೇಶವ ದೇಗುಲದ ಆವರಣದಲ್ಲಿ ಮುಕ್ತಾಯಗೊಂಡಿತು.
ಚನ್ನಕೇಶವ ದೇಗುಲದ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹಳೇಬೀಡು ಪುಷ್ಪಗಿರಿ ಮಠದ ಶ್ರೀಸೋಮಶೇಖರ ಸ್ವಾಮೀಜಿ ಮಾತನಾಡಿ, ಸಂಸ್ಕಾರ ಕಲಿಸಬೇಕಾದ ಶಿಕ್ಷಣ ಸಂಸ್ಥೆಗಳು ಉದ್ಯಮವಾಗಿ ಪರಿವರ್ತನೆಯಾಗುತ್ತಿವೆ ಎಂದು ಬೇಸರ ವ್ಯಕ್ತಪಡಿ ಸಿದರು. ಅಲ್ಲದೆ ವಿದ್ಯಾಸಂಸ್ಥೆಗಳು ವಿದ್ಯಾರ್ಥಿಗಳನ್ನು ಅಲಂಕಾರಿಕ ವಸ್ತುಗಳನ್ನಾಗಿ ಮಾಡುತ್ತಿವೆ. ಅವರಿಗೆ ನಮ್ಮ ಸಂಸ್ಕೃತಿ, ಸಂಸ್ಕಾರಗಳನ್ನು ಕಲಿಸುವಲ್ಲಿ ವಿಫಲವಾಗುತ್ತಿದೆ. ಇದರಿಂದಾಗಿ ಸಂಸ್ಕಾರ ಕಲಿಯದ ವಿದ್ಯಾರ್ಥಿಗಳು ದುಶ್ಚಟಗಳ ದಾಸರಾಗಿ ದೇಶದ ಅಭಿವೃದ್ಧಿಗೆ ಮಾರಕರಾಗಿದ್ದಾರೆ ಎಂದರು.
ಶಾಸಕ ಕೆ.ಎಸ್.ಲಿಂಗೇಶ್ ಮಾತನಾಡಿ, ದೇಶದಲ್ಲಿ ಅನಾಗರಿಕತೆ ಹೆಚ್ಚಾಗಲು ಸಂಸ್ಕಾರದ ಕೊರತೆಯೇ ಮೂಲ ಕಾರಣ. ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಶಿಕ್ಷಣ ನೀಡಿದರೆ ಅವರು ದೇಶದ ಸತ್ಪ್ರಜೆಗಳಾಗಿ, ದೊಡ್ಡ ಆಸ್ತಿಯಾಗುತ್ತಾರೆ ಎಂದರು. ಸಂಸ್ಕಾರ ಭಾರತಿಯಿಂದ ಹೊರತಂದಿರುವ ಕಲಾ ತಪಸಿ ಪುಸ್ತಕವನ್ನು ಬಾಬಾ ಯೋಗೀಂದ್ರ ಜೀ ಬಿಡುಗಡೆ ಮಾಡಿದರು. ಚಿತ್ರನಟ ಹಾಗೂ ಸಂಸ್ಕಾರ ಭಾರತಿ ಪ್ರಾಂತ ಮಹಾಮಂತ್ರಿ ಸುನೀಲ್‌ಪುರಾಣಿಕ್, ಸಂಸ್ಕಾರ ಭಾರತಿ ಪ್ರಾಂತ ಕಾರ್ಯದರ್ಶಿ ಹರಿಹರಪುರ ಶ್ರೀಧರ್, ಸ್ವಾಗತ ಸಮಿತಿ ಅಧ್ಯಕ್ಷ ತೀರ್ಥಮಲ್ಲೇಶ್, ಕಾರ್ಯದರ್ಶಿ ರಮೇಶ್‌ಬಾಬು, ಕೃಷ್ಣಶೆಟ್ಟಿ, ತಾಲೂಕು ಜೆಡಿಎಸ್ ಅಧ್ಯಕ್ಷ ತೋ. ಚ. ಅನಂತಸುಬ್ಬರಾಯ, ಬಿಜೆಪಿ ಮುಖಂಡ ಸುರೇಶ್, ಪುರಸಭೆ ಮಾಜಿ ಅಧ್ಯಕ್ಷ ಶ್ರೀನಿಧಿ ಹಾಜರಿದ್ದರು.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...