ಬೇಲೂರು: ದ್ವಿತೀಯ ಪಿಯು ಪರೀಕ್ಷೆ ಜೂನ್ 18ರಂದು ನಡೆಯಲಿದ್ದು, ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೀಸಲು ಕೊಠಡಿಗಳನ್ನು ಪುರಸಭೆ ಸಿಬ್ಬಂದಿ ಸ್ಯಾನಿಟೈಸ್ ಮಾಡಿದರು.
ಕರೊನಾ ಭೀತಿಯಿಂದ ಮುಂದೂಡಲ್ಪಟ್ಟಿದ್ದ ದ್ವಿತೀಯ ಪಿಯು ಇಂಗ್ಲಿಷ್ ಪರೀಕ್ಷೆಯನ್ನು ನಡೆಸಲು ಸರ್ಕಾರ ಕ್ರಮ ಕೈಗೊಂಡಿದ್ದು, ಸ್ಥಳೀಯ ಕಾಲೇಜಿನ ಪರೀಕ್ಷಾ ಕೇಂದ್ರಗಳಲ್ಲೂ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.
ವಿದ್ಯಾರ್ಥಿಗಳಿಗೆ ಯಾವುದೇ ವಿಧದಲ್ಲಿ ಸೋಂಕು ಹರಡದಂತೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ನೀಡಿದ ನಿರ್ದೇಶನಗಳನ್ನು ಪಾಲನೆ ಮಾಡಲಾಗಿದೆ. ಪರೀಕ್ಷೆ ನಡೆಯಲಿರುವ 23 ಕೊಠಡಿ ಸೇರಿ ಕಾಲೇಜಿನ ಆವರಣವನ್ನೂ ಪುರಸಭೆ ಸಿಬ್ಬಂದಿ ಓಬ್ಳೇಶ್ ಮತ್ತು ವಿಶ್ವನಾಥ್ ಸ್ಯಾನಿಟೈಸ್ ಮಾಡಿದರು.