ಬೇಲೂರು: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆಯೋಜಿಸಿರುವ 8ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಶನಿವಾರ ಅದ್ದೂರಿ ಚಾಲನೆ ದೊರಕಿತು.
ಪಟ್ಟಣದ ಪುರಸಭೆ ಆವರಣದಿಂದ ವಿವಿಧ ಜಾನಪದ ಕಲಾತಂಡಗಳ ಮೆರವಣಿಗೆ ಮೂಲಕ ಕುದುರೆ ಸಾರೋಟಿನ ರಥದಲ್ಲಿ ಸಮ್ಮೇಳನದ ಸರ್ವಾಧ್ಯಕ್ಷ ಬೇಲೂರು ರಘುನಂದನ್ ಅವರ ಮೆರವಣಿಗೆಗೆ ಚಾಲನೆ ನೀಡಲಾಯಿತು.
ಪಟ್ಟಣದ ಮುಖ್ಯರಸ್ತೆಯಲ್ಲಿ ಶಾಸಕ ಕೆ.ಎಸ್.ಲಿಂಗೇಶ್, ಕಸಾಪ ಅಧ್ಯಕ್ಷ ಬಿ.ಎಂ.ರವೀಶ್, ಗೌರವಾಧ್ಯಕ್ಷ ದಯಾನಂದ್ ಸೇರಿದಂತೆ ಇನ್ನಿತರೆ ಗಣ್ಯರು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಮತ್ತು ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿದ್ದ ಮೆರವಣಿಗೆ ಸಮ್ಮೇಳನ ಸ್ಥಳ ಚನ್ನಕೇಶವ ದೇಗುಲದ ಆವರಣ ತಲುಪಿತು.
ಮೆರವಣಿಗೆಯಲ್ಲಿ ನೂರಾರು ಜನರು ಪಾಲ್ಗೊಂಡಿದ್ದರು. ಜಾನಪದ ಕಲಾತಂಡಗಳ ಪ್ರದರ್ಶನ ಜನಮನ ಸೆಳೆಯಿತು.