ಭಾರತ ವಿರುದ್ಧ ಟೆಸ್ಟ್ ಸರಣಿಯಿಂದ ಹೊರನಡೆದ ಇಂಗ್ಲೆಂಡ್ ಆಲ್ರೌಂಡರ್ ಬೆನ್ ಸ್ಟೋಕ್ಸ್

blank

ಲಂಡನ್: ಮಾನಸಿಕ ಆರೋಗ್ಯ ಸಮಸ್ಯೆಯಿಂದಾಗಿ ಇಂಗ್ಲೆಂಡ್ ಆಲ್ರೌಂಡರ್ ಬೆನ್ ಸ್ಟೋಕ್ಸ್ ಎಲ್ಲ ಮಾದರಿಯ ಕ್ರಿಕೆಟ್‌ನಿಂದ ಅನಿರ್ದಿಷ್ಟಾವಧಿಗೆ ಬಿಡುವು ಪಡೆದಿದ್ದಾರೆ. ಇದರಿಂದಾಗಿ ಸ್ಟೋಕ್ಸ್ ಆಗಸ್ಟ್ 4ರಿಂದ ಭಾರತ ವಿರುದ್ಧ ನಡೆಯಲಿರುವ 5 ಪಂದ್ಯಗಳ ಟೆಸ್ಟ್ ಸರಣಿಗೆ ಅಲಭ್ಯರಾಗಿದ್ದಾರೆ. ಸ್ಟೋಕ್ಸ್ ಅವರಿಂದ ತೆರವಾಗಿರುವ ಸ್ಥಾನಕ್ಕೆ ಮತ್ತೋರ್ವ ಆಲ್ರೌಂಡರ್ ಕ್ರೇಗ್ ಓವರ್ಟನ್ ಆಯ್ಕೆಯಾಗಿದ್ದಾರೆ.

ಈ ಬಿಡುವಿನಿಂದ ಸ್ಟೋಕ್ಸ್‌ಗೆ ಎಡಗೈ ಬೆರಳಿನ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಕೂಡ ಸಮಯ ಲಭಿಸಿದೆ. ಈ ಗಾಯ ಪೂರ್ಣ ವಾಸಿಯಾಗದ ನಡುವೆಯೂ ಅವರು ಕಳೆದ ತಿಂಗಳು ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳಿದ್ದರು. ಪಾಕ್ ವಿರುದ್ಧದ ಸರಣಿಗೆ ಮುನ್ನ ಇಂಗ್ಲೆಂಡ್‌ನ ಪ್ರಮುಖ ತಂಡ ಕರೊನಾದಿಂದಾಗಿ ಕ್ವಾರಂಟೈನ್‌ಗೆ ಒಳಗಾಗಿದ್ದ ಕಾರಣ ಸ್ಟೋಕ್ಸ್ ಹಂಗಾಮಿ ನಾಯಕರಾಗಿ ಕಣಕ್ಕಿಳಿದಿದ್ದರು. ಸ್ಟೋಕ್ಸ್ ಮುಂಬರುವ ಐಪಿಎಲ್ 14ನೇ ಆವೃತ್ತಿಯ 2ನೇ ಭಾಗ, ಟಿ20 ವಿಶ್ವಕಪ್ ಮತ್ತು ಆಶಸ್ ಸರಣಿಗಳಲ್ಲಿ ಆಡುವ ಬಗ್ಗೆಯೂ ಸ್ಪಷ್ಟತೆ ಇಲ್ಲದಾಗಿದೆ.

ಇದನ್ನೂ ಓದಿ: ಒಲಿಂಪಿಕ್ಸ್‌ನಲ್ಲಿ 41 ವರ್ಷಗಳ ಬಳಿಕ ನಾಕೌಟ್‌ಗೇರಿದ ಭಾರತದ ಮಹಿಳಾ ಹಾಕಿ ತಂಡ

ಇತ್ತೀಚೆಗೆ ಕ್ರಿಕೆಟ್‌ನಲ್ಲಿ ಮಾನಸಿಕ ಆರೋಗ್ಯದ ಸಮಸ್ಯೆ ಸಾಕಷ್ಟು ಆಟಗಾರರಲ್ಲಿ ಕಾಣಿಸಿದೆ. ಆಸ್ಟ್ರೇಲಿಯಾದ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಕೂಡ ಇದೇ ಕಾರಣದಿಂದಾಗಿ ಕೆಲಕಾಲ ಕ್ರಿಕೆಟ್‌ನಿಂದ ಬಿಡುವು ಪಡೆದಿದ್ದರು. ಕರೊನಾ ಭೀತಿಯಿಂದಾಗಿ ಬಯೋಬಬಲ್‌ನಲ್ಲಿ ಹೆಚ್ಚಿನ ಸಮಯ ಕಳೆಯುವುದು ಕೂಡ ಮಾನಸಿಕ ಆರೋಗ್ಯದ ಸಮಸ್ಯೆ ಸೃಷ್ಟಿಸಿದೆ ಎಂದು ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕೂಡ ಇತ್ತೀಚೆಗೆ ಹೇಳಿಕೊಂಡಿದ್ದರು.

ಮೀರಾ ಗೆದ್ದ ಒಲಿಂಪಿಕ್ಸ್ ಬೆಳ್ಳಿ ಪದಕ ಚಿನ್ನವಾಗುವುದು ನಿಜವೇ? ಇಲ್ಲಿದೆ ರಿಯಲ್​ ಸ್ಟೋರಿ…

ಭಾರತ ವಿರುದ್ಧ ಸರಣಿ ಗೆದ್ದ ಶ್ರೀಲಂಕಾ ತಂಡಕ್ಕೆ ಸಂತಸದಿಂದ ಬೋನಸ್ ನೀಡಿದ ಕ್ರಿಕೆಟ್ ಮಂಡಳಿ!

ben

Share This Article

ಕನಸಿನಲ್ಲಿ ಈ ಮೂರು ಪಕ್ಷಿಗಳು ಕಂಡ್ರೆ ಲಾಟರಿ ಹೊಡೆದಂತೆ! Lucky Birds ನೀಡುವ ಸುಳಿವೇನು..?

Lucky Birds : ಸಾಮಾನ್ಯವಾಗಿ ನಿದ್ದೆಯಲ್ಲಿ ಕನಸು ಕಾಣೋದು ಸಹಜ. ಈ ಕನಸುಗಳ ಮೂಲಕ ಪ್ರಕೃತಿ…

ಯಾವ ಕಾರಣಕ್ಕೂ ಮಾವಿನ ವಾಟೆ ಎಸೆಯಬೇಡಿ…ಅದರ ಪ್ರಯೋಜನಗಳ ಬಗ್ಗೆ ತಿಳಿದ್ರೆ ನೀವು ಖಂಡಿತ ಅಚ್ಚರಿಪಡ್ತೀರಾ! Mango Kernels

Mango Kernels : ಮಾವಿನ ಹಣ್ಣನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ರುಚಿಗೆ ಮಾತ್ರವಲ್ಲ, ಮಾವಿನ…

ಪ್ಲಾಸ್ಟಿಕ್ ಬಾಕ್ಸ್​​ನಲ್ಲಿ ಬಿಸಿ ಅನ್ನ ಇಡುವ ಅಭ್ಯಾಸವಿದೆಯೇ? ಆರೋಗ್ಯದ ಬಗ್ಗೆ ಇರಲಿ ಎಚ್ಚರ.. hot rice in plastic boxes

hot rice in plastic boxes: ಪ್ಲಾಸ್ಟಿಕ್ ಬಳಕೆಯನ್ನು ತಡೆಯಲಾಗುತ್ತಿಲ್ಲ. ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸುವುದು ಹಾನಿಕಾರಕ,…