More

    ಮಾ.5ಕ್ಕೆ ಫಲಾನುಭವಿಗಳ ಸಮಾವೇಶ

    ತುಮಕೂರು: ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಮಾ.5ರಂದು ಫಲಾನುಭವಿಗಳ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಸಿಎಂ ಬಸವರಾಜು ಬೊಮ್ಮಾಯಿ ಭಾಗವಹಿಸಲಿದ್ದಾರೆ.ಸಮಾವೇಶದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಗುರುವಾರ ಅಧಿಕಾರಿಗಳ ಸಭೆ ನಡೆಸಿದ್ದು, ವಿವಿಧ ಇಲಾಖೆಯ ಯೋಜನೆಗಳಡಿ ಆಯ್ಕೆಯಾಗಿರುವ 25000 ಅರ್ಹ ಫಲಾನುಭವಿಗಳಿಗೆ ಸರ್ಕಾರದ ವಿವಿಧ ಸೌಲಭ್ಯ ವಿತರಿಸಲಾಗುತ್ತಿದೆ ಎಂದು ಡಿಸಿ ತಿಳಿಸಿದರು

    .ಸಮಾವೇಶದಲ್ಲಿ ಕೃಷಿ, ತೋಟಗಾರಿಕೆ, ಸಮಾಜ ಕಲ್ಯಾಣ, ರೇಷ್ಮೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮೀನುಗಾರಿಕೆ, ಕಾರ್ಮಿಕ ಇಲಾಖೆಗಳು ಸೇರಿ ವಿವಿಧ ನಿಗಮಗಳು ನೀಡುವ ಸಾಲ-ಸಹಾಯಧನ, ರೈತ ವಿದ್ಯಾನಿಧಿ, ವಿದ್ಯಾಸಿರಿ, ಗಂಗಾ ಕಲ್ಯಾಣ, ವಿದ್ಯಾರ್ಥಿವೇತನ, ಪಿಎಂ ಕಿಸಾನ್, ಪ್ರೋತ್ಸಾಹಧನ, ಕಾನೂನು ತರಬೇತಿ ಹಾಗೂ ಮತ್ತಿತರ ಸೌಲಭ್ಯಗಳನ್ನು ಸಿಎಂ ಜಿಲ್ಲೆಯ ಫಲಾನುಭವಿಗಳಿಗೆ ವಿತರಿಸಲಿದ್ದಾರೆ.

    ಜಿಲ್ಲೆಯ ಎಲ್ಲ ತಾಲೂಕಿನ ಫಲಾನುಭವಿಗಳನ್ನು ಕರೆತರುವ ಜವಾಬ್ದಾರಿಯನ್ನು ಆಯಾ ಇಲಾಖೆಗಳಿಗೆ ವಹಿಸಲಾಗಿದ್ದು, ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಸರ್ಕಾರದ ಹಣದಲ್ಲಿ ಬೃಹತ್ ಸಭೆ ನಡೆಯಲಿದೆ ಎಂದರು.ಸಮಾವೇಶದ ಅಂಗವಾಗಿ ಮಾ.5ರಿಂದ 8ರವರೆಗೆ ತೋಟಗಾರಿಕಾ ಇಲಾಖೆಯಿಂದ ಫಲಪುಷ್ಟ ಪ್ರದರ್ಶನ ಏರ್ಪಡಿಸಲು ತೋಟಗಾರಿಕೆ ಉಪನಿರ್ದೇಶಕ ರಘು ಅವರಿಗೆ ಡಿಸಿ ಸೂಚಿಸಿದರು.ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಾ.5 ರಿಂದ 8ರವರೆಗೆ ವಿಶೇಷ ವಸ್ತುಪ್ರದರ್ಶನ ನಡೆಯಲಿದೆ.

    ಸಮಾವೇಶಕ್ಕೆ ಎಲ್ಲ ತಾಲೂಕುಗಳಿಂದ ಲಾನುಭವಿಗಳನ್ನು ಕರೆತರಲು 600 ಬಸ್ ವ್ಯವಸ್ಥೆ ಮಾಡಬೇಕು ಎಂದು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಗಜೇಂದ್ರ ಅವರಿಗೆ ನಿರ್ದೇಶನ ನೀಡಿದರು.ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ರಾಹುಲ್‌ಕುಮಾರ್ ಶಹಾಪೂರವಾಡ್, ಶಾಸಕ ಜಿ.ಬಿ.ಜ್ಯೋತಿಗಣೇಶ್, ಉಪವಿಭಾಗಾಧಿಕಾರಿ ಎಚ್.ಶಿವಪ್ಪ ಮತ್ತಿತರರು ಇದ್ದರು.

    ವಿವಿಧ ಕಟ್ಟಡಗಳ ಉದ್ಘಾಟನೆಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ ಐಸಿಎಂಸಿಸಿ ಕಟ್ಟಡ, ಮಹಾತ್ಮ ಗಾಂಧಿ ಕ್ರೀಡಾಂಗಣ, ಜಿಲ್ಲಾ ಆಸ್ಪತ್ರೆಯ ಟ್ರಾಮಾ ಸೆಂಟರ್, ನಗರದ ರಿಂಗ್ ರಸ್ತೆ-ಸ್ಮಾರ್ಟ್ ರಸ್ತೆ-ಲಿಂಕ್ ರಸ್ತೆ, ಬಾಲಕರ ಪಿಯು ಕಾಲೇಜಿನಲ್ಲಿ ಕೈಗೊಂಡಿರುವ ವಿವಿಧ ಕಾಮಗಾರಿ, ಸಾರ್ವಜನಿಕ ಗ್ರಂಥಾಲಯ, ನಗರದ ವಿವಿಧ ವಾರ್ಡ್‌ಗಳಲ್ಲಿ ಅಭಿವೃದ್ಧಿಪಡಿಸಿರುವ ಉದ್ಯಾನವನಗಳು, ಅಮಾನಿಕೆರೆಯಲ್ಲಿ ಕೈಗೊಂಡಿರುವ ವಿವಿಧ ಕಾಮಗಾರಿ ಸೇರಿ ವಿವಿಧ ಕಟ್ಟಡ ಕಾಮಗಾರಿಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ.

    Beneficiaries meeting held on Mar. 5

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts