ಮುಖದ ಕಾಂತಿ ಹೆಚ್ಚಿಸಬೇಕಾ..? ಪ್ರತಿನಿತ್ಯ ಒಂದು ಬಾಳೆಹಣ್ಣು ಸೇವಿಸಿ..

banana
Published on

- ಬಾಳೆಹಣ್ಣಿನಲ್ಲಿದೆ ಆಯುರ್ವೇದದ ಔಷಧೀಯ ಗುಣಗಳು

ಬೆಂಗಳೂರು: ಎಲ್ಲಾ ಕಾಲದಲ್ಲೂ ಲಭ್ಯವಿರುವ ಹಣ್ಣು ಬಾಳೆಹಣ್ಣು. ಜನಸಾಮಾನ್ಯರಿಗೆ ಕೈಗೆಟಕುವ ಬೆಲೆಯಲ್ಲಿ ಸಿಗುವ ಈ ಬಾಳೆ ಹಣ್ಣು ಉತ್ತಮ ಆರೋಗ್ಯಕ್ಕೆ ಬೇಕಾಗಿರುವ ಪೋಷಕಾಂಶಗಳನ್ನು ಹೊಂದಿದೆ. ಈ ಹಣ್ಣನ್ನು ಪ್ರತಿನಿತ್ಯ ಸೇವನೆ ಮಾಡುವುದರಿಂದ ಕೆಲವು ಕಾಯಿಲೆಗಳಿಂದ ದೂರ ಇರಬಹುದಾಗಿದೆ.

ಬಾಳೆಹಣ್ಣಿನಲ್ಲಿರುವ ಪೋಷಕಾಂಶಗಳು: ಪ್ರೋಟೀನ್, ಪೊಟ್ಯಾಸಿಯಮ್, ಮೆಗ್ನೀಸಿಯಮ್, ವಿಟಮಿನ್-ಎ, ಬಿ, ಸಿ ಮತ್ತು ವಿಟಮಿನ್ ಬಿ6 , ಕಬ್ಬಿಣಂಶ, ಹಾಗೂ ನಾರಿನಾಂಶ ಸೇರಿದಂತೆ, ತನ್ನಲ್ಲಿ ವಿವಿಧ ಬಗೆಯ ಆರೋಗ್ಯಕರ ಗುಣಗಳನ್ನು ಒಳಗೊಂಡಿದೆ.

ಬಾಳೆಹಣ್ಣಿನ ಔಷಧೀಯ ಗುಣಗಳು: ಪ್ರತಿದಿನ ಬಾಳೆಹಣ್ಣನ್ನು ಸೇವಿಸುವುದರಿಂದ ನಿಮ್ಮ ಜ್ಞಾಪಕಶಕ್ತಿಯನ್ನು ಬಲಪಡಿಸುತ್ತದೆ.

ವಿಟಮಿನ್ ಬಿ 6 ಮತ್ತು ಮೆಗ್ನೀಸಿಯಮ್ ಸ್ನಾಯುಗಳನ್ನು ಸಡಿಲಗೊಳಿಸುತ್ತದೆ ಮತ್ತು ನಿದ್ರೆಗೆ ಸಹಾಯ ಮಾಡುತ್ತದೆ.

ಬಾಳೆಹಣ್ಣನ್ನು ತಿನ್ನುವುದರಿಂದ ಅಸಿಡಿಟಿ , ಎದೆ ಉರಿ ಹೊಟ್ಟೆ ಉಬ್ಬರ ಇವು ಕಡಿಮೆಯಾಗುತ್ತವೆ

ಬಾಳೆಹಣ್ಣಿನಲ್ಲಿ ಪೊಟ್ಯಾಸಿಯಂ ಅಂಶ ಹೆಚ್ಚಾಗಿದೆ. ಪೊಟ್ಯಾಸಿಯಂ ಪುರುಷರ ಲೈಂಗಿಕ ಶಕ್ತಿ ಹೆಚ್ಚಿಸುವಲ್ಲಿ ಹಾಗು ವೀರ್ಯಾಣುವಿನ ಬೆಳವಣಿಗೆಯಲ್ಲಿ ಮಹತ್ತರ ಪಾತ್ರ ವಹಿಸುತ್ತದೆ.

ಹಣ್ಣಿನಲ್ಲಿ ಪೊಟ್ಯಾಸಿಯಂ ಅಂಶ ಹೆಚ್ಚಾಗಿರುವುದರಿಂದ , ಇದು ಅಧಿಕ ರಕ್ತದೊತ್ತಡ ಅಥವಾ ಹೈ ಬಿಪಿಯಲ್ಲಿ ಉಪಯುಕ್ತವಾಗಿದೆ.

ಮುಖದ ಸೌಂದರ್ಯ ಹಾಗೂ ಕಾಂತಿಯನ್ನು ವರ್ಧಿಸುವುದಲ್ಲದೆ ಚರ್ಮದ ಆರೋಗ್ಯವನ್ನೂ ವೃದ್ಧಿಸುತ್ತದೆ . ಇದಕ್ಕೆ ಪಕ್ವವಾದ ಬಾಳೆಹಣ್ಣನ್ನು ಚೆನ್ನಾಗಿ ಕಿವುಚಿ ಅದನ್ನು ಮುಖಕ್ಕೆ ಲೇಪಿಸಿ ೨೦ ನಿಮಿಷದ ನಂತರ ಮುಖ ತೊಳೆಯಿರಿ.

ರಾತ್ರಿ ಮಲಗುವ ಮುನ್ನ ಬಾಳೆಹಣ್ಣು ಸೇವಿಸಿ: ರಾತ್ರಿ ಮಲಗುವ ಮುನ್ನ ಒಂದೆರಡು ಬಾಳೆಹಣ್ಣನ್ನು ತಿನ್ನುವುದರಿಂದ ಯಾವುದೇ ಸಮಸ್ಯೆ ಇಲ್ಲ. ಯಾಕೆಂದರೆ ಇದರಲ್ಲಿರುವ ನಾರಿನಾಂಶವು ಜೀರ್ಣಕ್ರಿಯೆಯ ಪ್ರಕ್ರಿಯೆಯನ್ನು ಹೆಚ್ಚಿಸುತ್ತದೆ. ಅಷ್ಟೇ ಅಲ್ಲದೇ ಇದರಲ್ಲಿರುವ ಇರುವಂತಹ ಮೆಗ್ನಿಶಿಯಂ ಅಂಶವು ಒಳ್ಳೆಯ ನಿದ್ರೆಗೆ ಕಾರಣವಾಗುವುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net