More

    ಗ್ಯಾರಂಟಿ ಯೋಜನೆಗಳಿಂದ ಸಾರ್ವಜನಿಕರಿಗೆ ಅನುಕೂಲ


    ಮಡಿಕೇರಿ: ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯಂತೆ ಗ್ರಾಮದ ಅಭಿವೃದ್ಧಿಗೆ ಪೂರಕವಾದ ಕಾರ್ಯ ನಿರ್ವಹಿಸುವುದಾಗಿ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ತಿಳಿಸಿದರು.


    ಗೋಣಿಕೊಪ್ಪದ ಬಿ.ಶೆಟ್ಟಿಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮುದಾಯ ಭವನದಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.


    ಕಾಂಗ್ರೆಸ್ ಪಕ್ಷ ನೀಡಿದ್ದ ಗ್ಯಾರಂಟಿಗಳಲ್ಲಿ ಈಗಾಗಲೇ ರಾಜ್ಯ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಜನಪರ ಕಾಳಜಿ ಮೆರೆದಿದೆ. ಈ ಯೋಜನೆಗಳು ಪ್ರತಿ ಕುಟುಂಬಗಳಿಗೆ ತಲುಪುತ್ತಿವೆ. ಗ್ಯಾರಂಟಿ ಯೋಜನೆಯ ಬಗ್ಗೆ ವಿರೋಧ ವ್ಯಕ್ತ ಪಡಿಸುವವರಿಗೆ ಕಾಂಗ್ರೆಸ್ ಕಾರ್ಯಕರ್ತರು ಸರಿಯದ ಉತ್ತರ ನೀಡಬೇಕು ಎಂದರು.


    ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈ ಯೋಜನೆಯನ್ನು ಅನುಷ್ಠಾನಗೊಳಿಸಿದ್ದಾರೆ. ಕ್ಷೇತ್ರದಲ್ಲಿ ಶೇ.95ರಷ್ಟು ಫಲಾನುಭವಿಗಳು ಈ ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ. ಕೆಲವರಿಗೆ ತಾಂತ್ರಿಕ ಸಮಸ್ಯೆಗಳಿಂದ ಸೌಲಭ್ಯ ತಲುಪಿಲ್ಲ. ಈ ಬಗ್ಗೆಯೂ ಸರ್ಕಾರ ಕ್ರಮ ವಹಿಸುತ್ತಿದೆ ಎಂದರು.


    ಪಕ್ಷದ ಚಟುವಟಿಕೆಗಳು ನಿರಂತರವಾಗಿ ನಡೆಯಬೇಕು. ಗ್ರಾಮದ ಮೂಲಸೌಕರ್ಯಗಳಿಗೆ ಆದ್ಯತೆ ನೀಡಲಾಗುವುದು. ಮುಂದಿನ ಬಜೆಟ್ ನಂತರ ಅನುದಾನಗಳು ಹಂಚಿಕೆಯಾಗಲಿವೆ. ಆ ಸಂದರ್ಭದಲ್ಲಿ ಆದ್ಯತೆ ಮೇರೆಗೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು.


    ಟಿ.ಶೆಟ್ಟಿಗೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೊಲ್ಲೀರ ಬೋಪಣ್ಣ ಮಾತನಾಡಿ, ಪಕ್ಷ ಅಧಿಕಾರಕ್ಕೆ ಬಂದು 8 ತಿಂಗಳು ಮಾತ್ರ ಕಳೆದಿವೆ. ಹೀಗಾಗಿ, ಮುಂದಿನ ದಿನಗಳಲ್ಲಿ ಪಂಚಾಯಿತಿಯ ಅಭಿವೃದ್ಧಿ ಸಾಕಷ್ಟು ಅನುದಾನಗಳು ಬರುವ ನಿರೀಕ್ಷೆಯಲ್ಲಿದ್ದೇವೆ. ಪಕ್ಷದ ಕಾರ್ಯಕರ್ತರು ಪಂಚಾಯಿತಿ ವ್ಯಾಪ್ತಿಯಲ್ಲಿ ನಿರಂತರವಾಗಿ ಪಕ್ಷ ಸಂಘಟನೆಗೆ ದುಡಿಯುತ್ತಿದ್ದಾರೆ ಎಂದರು.


    ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್‌ನ ಅಧ್ಯಕ್ಷರಾದ ಮಿದೇರಿರ ನವೀನ್ ಮಾತನಾಡಿದರು. ಶಾಸಕರು ಎ.ಎಸ್. ಪೊನ್ನಣ್ಣ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು.

    ಬಿ.ಶೆಟ್ಟಿಗೇರಿ ವಲಯ ಕಾಂಗ್ರೆಸ್ ಅಧ್ಯಕ್ಷ ತೀತಿಮಾಡ ಸದಾ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಉಮೇಶ್ ಕೇಚಮಯ್ಯ, ಜಿಲ್ಲಾ ಕಾಂಗ್ರೆಸ್ ಸದಸ್ಯ ಕಡೇಮಾಡ ಕುಸುಮಾ ಜೋಯಪ್ಪ, ಪಕ್ಷದ ಹಿರಿಯ ಮುಖಂಡರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts