ಭಾರತದ ಈ ಮೂರು ರಾಜ್ಯಗಳು ನಮಗೆ ಸೇರಿದ್ದು; ವಿವಾದ ಹುಟ್ಟುಹಾಕಿದ Bangladesh

Mahfuz Alam
Published on

ಢಾಕಾ: ಉದ್ಯೋಗ ಮೀಸಲಾತಿ ವಿಚಾರವಾಗಿ ಬಾಂಗ್ಲಾದೇಶದಲ್ಲಿ (Bangladesh) ಶುರುವಾದ ಗಲಾಟೆ ದಿನ ಕಳೆದಂತೆ ತೀವ್ರಗೊಳ್ಳುತ್ತಿದ್ದು, ಅಲ್ಪಸಂಖ್ಯಾತರಾದ ಹಿಂದೂಗಳ ಮೇಲೆ ನಿರಂತರವಾಗಿ ದಾಳಿ ನಡೆಯುತ್ತಿವೆ. ಇದೆಲ್ಲದರ ನಡುವೆ ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ತ್ರಿಪುರಾ ಬಾಂಗ್ಲಾದೇಶಕ್ಕೆ ಸೇರಿದ್ದು ಎಂದು ಹೇಳುವ ಮೂಲಕ ಮತ್ತೊಮ್ಮೆ ಉದ್ಧಟತನ ಮೆರದಿದೆ. ಸದ್ಯ ಈ ವಿಚಾರ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದೆ.

ಬಾಂಗ್ಲಾದೇಶ (Bangladesh) ಮಧ್ಯಂತರ ಸರ್ಕಾರದ ಮುಖ್ಯಸ್ಥ ಮುಹಮ್ಮದ್ ಯೂನಸ್ ಆಪ್ತ ಮಹ್ಫುಜ್ ಆಲಂ (Mahfuz Alam) ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡುವ ಮೂಲಕ ವಿವಾದದ ಕಿಡಿಯನ್ನು ಹೊತ್ತಿಸಿದ್ದು, ಶೇಖ್ ಹಸೀನಾ ಪದಚ್ಯುತಿಗೆ ಕಾರಣವಾದ ದಂಗೆಗೆ ಭಾರತ ಮಾನ್ಯತೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಮಹ್ಫುಜ್ ಆಲಂ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಭಾರತ ವಿದೇಶಾಂಗ ಇಲಾಖೆಯ ಕಾರ್ಯದರ್ಶಿ ರಣಧೀರ್​ ಜೈಸ್ವಾಲ್​, ಇಂತಹ ಹೇಳಿಕೆ ನೀಡುವಾಗ ಎಚ್ಚರ ಇರಲಿ. ವಿವಾದಾತ್ಮಕ ಹೇಳಿಕೆ ಕುರಿತು ಆ ದೇಶದೊಂದಿಗೆ ಭಾರತ ಪ್ರಬಲ ಪ್ರತಿಭಟನೆ ದಾಖಲಿಸಿದೆ. ಸಾರ್ವಜನಿಕವಾಗಿ ಹೇಳುವಾಗ ಜವಾಬ್ದಾರಿಯ ಅಗತ್ಯವಿದೆ. ಬಾಂಗ್ಲಾದೇಶದೊಂದಿಗೆ ಸಂಬಂಧವನ್ನು ಬೆಳೆಸುವಲ್ಲಿ ಭಾರತದ ಆಸಕ್ತಿಯನ್ನು ವಿದೇಶಾಂಗ ಇಲಾಖೆಯ ಕಾರ್ಯದರ್ಶಿ ರಣಧೀರ್​ ಜೈಸ್ವಾಲ್​ ಪುನರುಚ್ಚರಿಸಿದ್ದಾರೆ.

ನೊಬೆಲ್ ಪ್ರಶಸ್ತಿ ಪುರಸ್ಕೃತ ಮೊಹಮ್ಮದ್ ಯೂನುಸ್ ನೇತೃತ್ವದಲ್ಲಿ ಮಧ್ಯಂತರ ಸರ್ಕಾರ ರಚನೆಯಾದಾಗಿನಿಂದಲೂ ಭಾರತ ಮತ್ತು ಬಾಂಗ್ಲಾದೇಶದ ಸಂಬಂಧದಲ್ಲಿ ಬಿಕ್ಕಟ್ಟು ದಿನ ಕಳೆದಂತೆ ಹೆಚ್ಚಾಗುತ್ತಿದೆ. ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದಾಳಿ ಹೆಚ್ಚಾಗುತ್ತಿದ್ದು, ಕೇಂದ್ರ ಸರ್ಕಾರ, ಅಲ್ಲಿರುವ ಹಿಂದೂಗಳ ಪ್ರಾಣ ಮತ್ತು ಸ್ವಾತಂತ್ರ್ಯಕ್ಕೆ ಬಾಂಗ್ಲಾದೇಶದ ಮಧ್ಯಂತರದ ಸರ್ಕಾರವೇ ಹೊಣೆ ಹೊರಬೇಕು ಎಂದು ಹೇಳಿದೆ.

https://www.vijayavani.net/ghost-problem-in-biggboss-house-promo-goes-viral-in-social-media

https://www.vijayavani.net/girlfriend-swapping-in-bangalore-found-investigation-reveals-more-secrets

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net