More

    ರಾಮನವಮಿಗೆ ಮೊದಲ ಬಾರಿಗೆ ಸಾರ್ವತ್ರಿಕ ರಜೆ ಘೋಷಿಸಿದ ಪಶ್ಚಿಮ ಬಂಗಾಳ ಸರ್ಕಾರ

    ಕಲ್ಕತ್ತಾ: ಮುಂದಿನ ಕೆಲವೇ ದಿನಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಈಗಾಗಲೇ ರಾಜಕೀಯ ಪಕ್ಷಗಳು ತಯಾರಿ ಆರಂಭಿಸಿದ್ದು, ಯಾವ ಕ್ಷಣದಲ್ಲಿ ಬೇಕಾದರೂ ದಿನಾಂಕ ಘೋಷಿಸುವ ಸಾಧ್ಯತೆ ದಟ್ಟವಾಗಿದೆ. ಈ ಮಧ್ಯೆ ರಾಜಕೀಯ ಪಕ್ಷಗಳು ಪ್ರಚಾರ ಕಾರ್ಯ ಆರಂಭಿಸಿದ್ದು, ಜನರ ಓಲೈಕೆಯಲ್ಲಿ ನಿರತವಾಗಿವೆ. ಅದಕ್ಕೆ ಪೂರಕವೆಂಬಂಎತ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಹತ್ವದ ಘೋಷಣೆ ಒಂದನ್ನು ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

    ಪಶ್ಚಿಮ ಬಂಗಾಳ ಸರ್ಕಾರ ರಾಮನವಮಿ ದಿನದಂದು ಸಾರ್ವತ್ರಿಕ ರಜೆ ಘೋಷಿಸಿದೆ. ಶನಿವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದ್ದು, ಸರ್ಕಾರದ ವತಿಯಿಂದ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ.

    ಇದನ್ನೂ ಓದಿ: ನಾಕೌಟ್​ ಪ್ರವೇಶಿಸಿದ ಮುಂಬೈ ಇಂಡಿಯನ್ಸ್​; ಆರ್​ಸಿಬಿ ಹಾದಿ ಕಷ್ಟಕರ

    ಪಶ್ಚಿಮ ಬಂಗಾಳದಲ್ಲಿ ಮೊದಲಿನಿಂದಲೂ ದುರ್ಗಾ ಪೂಜೆ ಹಾಗೂ ಕಾಳಿ ಪೂಜೆಯನ್ನು ಪ್ರಧಾನವಾಗಿ ಆಚರಿಸಿಕೊಂಡು ಬರಲಾಗುತ್ತದೆ. ಈ ಎರಡು ಹಬ್ಬಗಳಿಗೆ ಸರ್ಕಾರ ಮೊದಲಿನಿಂದಲೂ ರಜೆ ಘೋಷಿಸಿದೆ. ಆದರೆ, ರಾಜ್ಯದ ಇತಿಹಾಸದಲ್ಲಿ ರಾಮನವಮಿಗೆ ರಜೆ ಘೋಷಿಸಿದ್ದು ಇದೇ ಮೊದಲು ಎಂದು ಹೇಳಲಾಗಿದೆ.

    ಈ ಹಿಂದೆ ರಾಮನವಿ ಮೆರವಣಿಗೆ ನಡೆಯುವ ವೇಳೆ ಪಶ್ಚಿಮ ಬಂಗಾಳದ ಅನೇಕ ಕಡೆ ಹಿಂಸಾಚಾರ ನಡೆದಿತ್ತು. ಇದು ರಾಷ್ಟ್ರವ್ಯಾಪಿ ಸದ್ದು ಮಾಡಿತ್ತು. ಇದು ಆಡಳಿತರೂಢ ಟಿಎಂಸಿ ಹಾಗೂ ವಿಪಕ್ಷ ಬಿಜೆಪಿ ನಡುವೆಇನ ವಾಕ್ಸಮರಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಲೋಕಸಭೆ ಚುನಾವಣೆಗೆ ಮುನ್ನ ಸರ್ಕಾರ ರಾಮನವಮಿಗೆ ರಜೆ ಘೋಷಿಸಿರುವುದು ಹಲವರಲ್ಲಿ ಆಶ್ಚರ್ಯ ಮೂಡಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts