ಬಂಗಾಳ ಚುನಾವಣೆ : ಕರೊನಾ ಮುನ್ನೆಚ್ಚರಿಕೆ ಇಲ್ಲದೆ ಪ್ರಚಾರ

cor
Published on

ಕೊಲ್ಕತಾ : ನಿನ್ನೆ ಇನ್ನೂ ಚುನಾವಣಾ ಆಯೋಗವು ಕರೊನಾ ಮುನ್ನೆಚ್ಚರಿಕೆ ಕ್ರಮಗಳನ್ನು ಉಲ್ಲಂಘಿಸಿ ಪ್ರಚಾರ ಕಾರ್ಯ ಕೈಗೊಳ್ಳದಂತೆ ರಾಜಕೀಯ ನಾಯಕರು ಮತ್ತು ಅಭ್ಯರ್ಥಿಗಳಿಗೆ ಎಚ್ಚರಿಕೆ ನೀಡಿದೆ. ಆದರೆ ವಿಧಾನಸಭಾ ಚುನಾವಣೆಯ ಬಿಸಿ ಏರಿರುವ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಪಕ್ಷಗಳು ತಮ್ಮ ಪ್ರಚಾರ ಕಾರ್ಯವನ್ನು ಅಳುಕದೆ ಮುಂದುವರಿಸಿಕೊಂಡು ಹೋಗುತ್ತಿವೆ.

ಖುದ್ದು ಕೇಂದ್ರ ಗೃಹ ಸಚಿವರಾದ ಬಿಜೆಪಿ ನಾಯಕ ಅಮಿತ್​ ಷಾ ಅವರು ನಾಡಿಯ ಜಿಲ್ಲೆಯ ಶಾಂತಿಪುರದಲ್ಲಿ ರೋಡ್ ಶೋ ನಡೆಸಿದ್ದಾರೆ. ಮಕ್ಕಳೂ ಸೇರಿದಂತೆ ನೂರಾರು ಜನರು ಭಾರೀ ಸಂಖ್ಯೆಯಲ್ಲಿ ಸಾಮಾಜಿಕ ಅಂತರ ಪಾಲಿಸದೆ ನೆರೆದಿರುವ ಮತ್ತು ಮಾಸ್ಕ್ ಇಲ್ಲದೆ ಷಾ ಜನರಿಗೆ ನಮಸ್ಕಾರ ಮಾಡುತ್ತಿರುವ ಚಿತ್ರಗಳು ಜಾಲತಾಣದಲ್ಲಿ ಹರಿದಾಡುತ್ತಿವೆ.

ಮತ್ತೊಂದೆಡೆ, ಬಂಗಾಳದ ಸಿಎಂ ಹಾಗೂ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಜಲ್​ಪೈಗುರಿಯಲ್ಲಿ ಭಾರೀ ಪ್ರಚಾರ ಸಭೆ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷವೂ ತನ್ನ ಅಭ್ಯರ್ಥಿಗಳು ನಡೆಸುತ್ತಿರುವ ಪ್ರಚಾರ ಕಾರ್ಯಗಳ ಫೋಟೋಗಳನ್ನು ತನ್ನ ಟ್ವಿಟರ್​​ ಖಾತೆಯಲ್ಲಿ ಶೇರ್ ಮಾಡಿದ್ದು, ನಾಯಕರು ಮತ್ತು ಜನರು ಮಾಸ್ಕ್ ಧರಿಸದೆ ಪಾಲ್ಗೊಳ್ಳುತ್ತಿರುವುದು ಕಂಡುಬಂದಿದೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net