ಹಾವಿನ ವಿಷ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸಿದ ಆರೋಪಿ ಬಂಧನ, ಅದರ ಬೆಲೆ ಕೇಳಿದ್ರೆ ಹೌಹಾರೋದು ಗ್ಯಾರಂಟಿ..!

snake pic jh
Published on

ಜಲ್ಪಾಯ್​​ಗುರಿ: ಅಕ್ರಮವಾಗಿ 13 ಕೋಟಿ ರೂ. ಮೌಲ್ಯದ ಹಾವಿನ ವಿಷ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಘಟನೆ ಪಶ್ಚಿಮ ಬಂಗಾಳದ ದಕ್ಷಿಣ್ ದಿನಜ್​​ಪುರ್​​ನಲ್ಲಿ ನಡೆದಿದೆ.

ಅರಣ್ಯ ಇಲಾಖೆ ಮಾಹಿತಿ ಪ್ರಕಾರ, ಗೊರುಮರ ರಾಷ್ಟ್ರೀಯ ಪಾರ್ಕ್​ನಲ್ಲಿ ಆರೋಪಿ ಮೂರು ಜಾಡಿಯಲ್ಲಿ ಹಾವಿನ ವಿಷ ಶೇಖರಿಸಿಕೊಂಡಿದ್ದು, ಕಳ್ಳ ಮಾರ್ಗದಲ್ಲಿ ಚೀನಾ ದೇಶಕ್ಕೆ ಮಾರಾಟ ಮಾಡುವ ಯೋಜನೆ ರೂಪಿಸಿದ್ದಾನೆ.

ಖಚಿತ ಮಾಹಿತಿ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಅಲ್ಲದೇ ಆರೋಪಿಯನ್ನು ಆರು ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿರಿಸಿ ತನಿಖೆ ನಡೆಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net