More

    ಅಸೆಂಬ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ಬಿಜೆಪಿ ನಾಯಕರಿಗೆ RSS ಖಡಕ್ ಎಚ್ಚರಿಕೆ!

    ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಚಟುವಟಿಕೆ ಗರಿಗೆದರಿದೆ. ಸಾಲು ಸಾಲು ಸಮಾವೇಶಗಳು ಹಾಗೂ ಸಭೆಗಳು ನಡೆಯುತ್ತಿದ್ದು, ಕಾಂಗ್ರೆಸ್​, ಬಿಜೆಪಿ ಹಾಗೂ ಜೆಡಿಎಸ್​ ಮೂರು ಪಕ್ಷಗಳು ಭರ್ಜರಿ ಕಸರತ್ತು ನಡೆಸುತ್ತಿವೆ. ಇದರ ನಡುವೆ ಆಡಳಿತಾರೂಢ ಬಿಜೆಪಿ ನಾಯಕರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್​ಎಸ್​ಎಸ್​) ಖಡಕ್​ ಎಚ್ಚರಿಕೆಯನ್ನು ನೀಡಿದೆ.

    ವಿಧಾನಸಭಾ ಚುನಾವಣೆಗೆ ಕೆಲವೇ ದಿನ ಬಾಕಿ ಇರುವಾಗಲೇ ತನ್ನ ಸಮೀಕ್ಷಾ ವರದಿಯನ್ನು ಆಧರಿಸಿ ಆರ್​ಎಸ್​ಎಸ್​ ಖಡಕ್ ಎಚ್ಚರಿಕೆ ಸಂದೇಶ ರವಾನಿಸಿದೆ. ಸರ್ಕಾರ ಹಾಗೂ ಶಾಸಕರು ಇಬ್ಬರಿಗೂ ಪ್ರಬಲ ಆಢಳಿತ ವಿರೋಧಿ ಅಲೆ ಇದೆ ಎಂದು ಆರ್​ಎಸ್​ಎಸ್​ ಹೇಳಿದೆ.

    ರಾಜ್ಯದಲ್ಲಿ 40 ಪರ್ಸೆಂಟ್ ಶಾಸಕರಿಗೆ ಆಡಳಿತ ವಿರೋಧಿ ಅಲೆ ಇದೆ. ಬಿಜೆಪಿ ಶಾಸಕರು ಜನರಿಂದ ದೂರವಾಗಿದ್ದಾರೆ ಎಂಬ ಭಾವನೆ ಇದೆ. ಆಡಳಿತ ವಿರೋಧಿ ಅಲೆಯಿಂದ ಪಾರಾಗಲು ತಕ್ಷಣವೇ ಎಚ್ಚೆತ್ತುಕೊಳ್ಳಬೇಕು. ಕೂಡಲೇ ಕ್ರಮ ಕೈಗೊಳ್ಳದಿದ್ದರೆ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ ಎಂದು ಆರ್​ಎಸ್​ಎಸ್​ ಎಚ್ಚರಿಸಿದೆ.

    ಸರ್ಕಾರದ ಸಾಧನೆ ಬಿಂಬಿಸುವುದರಲ್ಲಿ ಬಿಜೆಪಿ ವಿಫಲವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಧನೆಗಳು ಜನರನ್ನು ತಲುಪಿಲ್ಲ. ಮೋದಿ ಜನಪ್ರಿಯತೆಯನ್ನು ಬಳಸಿಕೊಳ್ಳಲಾಗದ ಸ್ಥಿತಿಯಲ್ಲಿ ರಾಜ್ಯ ಬಿಜೆಪಿ ಇದೆ. ತಕ್ಷಣವೇ ಪಕ್ಷ ಮತ್ತು ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ರಾಜ್ಯ ಮತ್ತು ರಾಷ್ಟ್ರೀಯ ನಾಯಕರಿಗೆ ಆರ್​ಎಸ್ಎಸ್ ಸಲಹೆ ನೀಡಿದೆ ಎಂದು ದಿಗ್ವಿಜಯ ನ್ಯೂಸ್​ಗೆ ಬಿಜೆಪಿಯ ಉನ್ನತ ಮೂಲಗಳಿಂದ ಮಾಹಿತಿ ಬಂದಿದೆ. (ದಿಗ್ವಿಜಯ ನ್ಯೂಸ್​)

    ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಸರ್ಕಾರದಿಂದಲೇ ಪ್ರತ್ಯೇಕ ಆ್ಯಪ್ ಅಭಿವೃದ್ಧಿ: ಸಿಎಂ ಬೊಮ್ಮಾಯಿ‌ ಮಾಹಿತಿ

    ಗ್ರಾಹಕರಿಗೆ ಹೊಸ ಆಫರ್ ನೀಡಿದ ಬೆಸ್ಕಾಂ; ವಿದ್ಯುತ್ ಬಿಲ್ ಮೇಲೆ 0.25%ರಷ್ಟು ರಿಯಾಯಿತಿ

    ರೈಲಿನಲ್ಲಿ ಪ್ರಯಾಣಿಸುವಾಗ ಇಲಿ ಕಡಿತ: ಸಂತ್ರಸ್ತೆಗೆ 20 ಸಾವಿರ ರೂ. ಪರಿಹಾರ ನೀಡಲು ಆದೇಶ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts