ತೈಲ ಬೆಲೆ ಏರಿಕೆ ಪ್ರಧಾನಿ ನರೇಂದ್ರ ಮೋದಿಗೂ ಸಂತಸದ ವಿಷಯವಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ತೈಲ ಬೆಲೆ ಏರಿಕೆಯಿಂದ ದೇಶದ ಜನರು ತತ್ತರಿಸಿ ಹೋಗಿದ್ದಾರೆ. ಇದು ಪ್ರಧಾನಿ ನರೇಂದ್ರ ಮೋದಿ ಅವರಿಗೂ ಸಂತಸದ ವಿಷಯವಲ್ಲ ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಸೋಮವಾರ ಡಾಲರ್ಸ್ ಕಾಲನಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಜಾಸ್ತಿಯಾಗಿರುವುದಕ್ಕೆ ಬಿಜೆಪಿ ಕಾರಣ ಎಂದು ಬಿಂಬಿಸಲಾಗುತ್ತಿದೆ. ಕೇಂದ್ರದ ವಿರುದ್ಧ ಹೀಗೆ ಹೇಳುವುದು ಸರಿಯಲ್ಲ ಎಂದು ಹೇಳಿದರು.

ಬೆಲೆ ಏರಿಕೆ ಕಾಂಗ್ರೆಸ್​​ನ ಪಾಪದ ಕೂಸಾಗಿದೆ. ಸರಿಯಾದ ಆರ್ಥಿಕ ವ್ಯವಸ್ಥೆ ಇಟ್ಟುಕೊಳ್ಳಬೇಕಿತ್ತು. ಇಟ್ಟುಕೊಂಡಿದ್ದರೆ ಸಮಸ್ಯೆ ಆಗುತ್ತಿರಲಿಲ್ಲ. ಲೋಕಸಭೆ ಚುನಾವಣೆ ಗುರಿಯಾಗಿಸಿಕೊಂಡು ಕಾಂಗ್ರೆಸ್​ ಈ ರೀತಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು. (ದಿಗ್ವಿಜಯ ನ್ಯೂಸ್​)