ಉದ್ದೇಶಪೂರ್ವಕವಾಗಿ ಬೈಕ್‌ಗೆ ಡಿಕ್ಕಿ ಹೊಡೆದ ಕ್ಯಾಬ್ ಚಾಲಕ! ಅಲ್ಲಿ ನಡೆದಿದ್ದರೂ ಏನು? Cab driver

untitled-design-57-6906eb3b73aab
Published on

ಬೆಂಗಳೂರು: ಕ್ಯಾಬ್ ಚಾಲಕನೊಬ್ಬ (Cab driver) ಉದ್ದೇಶಪೂರ್ವಕವಾಗಿ ತನ್ನ ಕಾರನ್ನು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ನೆಲಕ್ಕೆ ಉರುಳಿರುವ ಘಟನೆ ಬೆಂಗಳೂರಿನ ಕೆ.ಆರ್. ಪುರಂ ಸೇತುವೆ ಬಳಿ ನಡೆದಿದ್ದು, ಇದೀಗ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ.

ಘಟನೆ ಏನು?

ಇಬ್ಬರು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬೈಕ್​ ಆಕಸ್ಮಿಕವಾಗಿ ಕಾರ್​ಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕರ ನಡುವೆ ಮಾತಿನ ಚಕಮಕಿ ಉಂಟಾಗಿದೆ. ಕೋಪದ ಬರದಲ್ಲಿ ಕ್ಯಾಬ್​ ಚಾಲಕ ಉದ್ದೇಶಪೂರ್ವಕವಾಗಿ ತನ್ನ ಕಾರನ್ನು ಬೈಕ್​ಗೆ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಇಬ್ಬರು ಬೈಕ್​ ಸವಾರರು ನೆಲಕ್ಕುರುಳಿದ್ದಾರೆ.

ಈ ಘಟನೆ ನಡೆದ ಬಳಿಕ ಕ್ಯಾಬ್​ ಚಾಲಕನು ತನ್ನ ಕಾರಿನಿಂದ ಇಳಿದು ಬೈಕ್ ಸವಾರರ ಕೀಯನ್ನು ಕಸಿದುಕೊಂಡಿದ್ದಾನೆ. ಈ ವೇಳೆ ಚಾಲಕನು ಕೀಯನ್ನು ಪಡೆಯಲು ಪ್ರಯತ್ನಿಸುತ್ತಿದ್ದರೂ ಆತ ನೀಡದೇ ಸತಾಯಿಸುತ್ತಿದ್ದಾನೆ. ಚಾಲಕನ ಸಹಚರ ಪರಿಸ್ಥಿತಿಯನ್ನು ಶಾಂತಗೊಳಿಸಲು ಪ್ರಯತ್ನಿಸುತ್ತಿರುವುದನ್ನು ಡ್ಯಾಶ್​ ಕ್ಯಾಮ್​ ವಿಡಿಯೋದಲ್ಲಿ ಸೆರೆಹಿಡಿಯಲಾಗಿದೆ.

ಈ ಘಟನೆ ಬಗ್ಗೆ ತನಿಖೆ ನಡೆಸುತ್ತಿರುವ ಪೊಲೀಸರು ಸತ್ಯಾಸತ್ಯತೆಗಳನ್ನು ಪರಿಶೀಲಿಸಲಾಗುತ್ತಿದ್ದು, ಈ ಬಗ್ಗೆ ತನಿಖೆ ಆರಂಭಿಸಿದ್ದೇವೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿಕೆ ನೀಡಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವಾರದ ಆರಂಭದಲ್ಲಿ, ಆಹಾರ ವಿತರಣಾ ಸಿಬ್ಬಂದಿಯೊಬ್ಬ ತನ್ನ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 2ಕಿ.ಮೀ ತನಕ ಆತನನ್ನು ಹಿಂಭಾಲಿಸಿದ ದಂಪತಿ ಆತನ ಬೈಕ್​ಗೆ ಡಿಕ್ಕಿ ಹೊಡೆದಿದ್ದಾರೆ. ಈ ಸಂಬಂಧ ವಿತರಣಾ ಏಜೆಂಟ್​ ನೆಲಕ್ಕುರುಳಿ ಮೃತಪಟ್ಟಿದ್ದನು. ಈ ಘಟನೆ ನಡೆದ ಬಳಿಕ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದರು. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net