More

    Deepavali celebration; ಮೊದಲ ದಿನ ಪಟಾಕಿ ಸಿಡಿತಕ್ಕೆ ಬೆಂಗಳೂರಿನಲ್ಲಿ 26 ಜನರಿಗೆ ಗಾಯ; ಬೆಂಗಳೂರು ಆಸ್ಪತ್ರೆಗಳಿಂದ 24X7 ಸೇವೆ

    ಬೆಂಗಳೂರು: ದೀಪಾವಳಿ ಹಬ್ಬ ಎಂದರೆ ಸಡಗರ ಸಂಭ್ರಮವಾಗಿದೆ. ದೀಪ ಬೆಳಗಿಸಿ, ಪಟಾಕಿ ಸಿಡಿಸಿ ಸಂಬ್ರಮದಿಂದ ಆಚರಿಸುತ್ತಾರೆ. ಆದರೆ ಮೊದಲ ದಿನ ಪಟಾಕಿ ಸಿಡಿತಕ್ಕೆ ಬೆಂಗಳೂರಿನಲ್ಲಿ 26 ಜನ ಗಾಯ ಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಪಟಾಕಿ ಸಿಡಿದು ರವಿವಾರ ಒಂದೇ ದಿನ ಮಕ್ಕಳು ಸೇರಿದಂತೆ 26 ಜನರು ಗಾಯಗೊಂಡಿದ್ದಾರೆ. ಬೆಂಗಳೂರಿನ ನಾರಾಯಣ ನೇತ್ರಾಲಯದಲ್ಲಿ 22 ಜನರು, ಮಿಂಟೋ ಆಸ್ಪತ್ರೆಯಲ್ಲಿ ನಾಲ್ವರು ಚಿಕ್ಸಿತ್ಸೆ ಪಡೆಯುತ್ತಿದ್ದಾರೆ.

    ನಾರಾಯಣ ನೇತ್ರಾಲಯ ಮುಖ್ಯಸ್ಥ ರೋಹಿತ್ ಶೆಟ್ಟಿ ಮಾತನಾಡಿ, ಬೆಂಗಳೂರಿನ ನಾರಾಯಣ ನೇತ್ರಾಲಯದಲ್ಲಿ 22 ಜನರು, ಮಿಂಟೋ ಆಸ್ಪತ್ರೆಯಲ್ಲಿ ನಾಲ್ವರು ಚಿಕ್ಸಿತ್ಸೆ ಪಡೆಯುತ್ತಿದ್ದಾರೆ. 22 ಜನರಲ್ಲಿ 10 ಜನರಿಗೆ ಗಂಭೀರ ಗಾಯಗಳಾಗಿದ್ದು, 12 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

    ಮಿಂಟೋ ಆಸ್ಪತ್ರೆಗೆ ದಾಖಲಾದ ನಾಲ್ವರಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಮಿಂಟೋ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.

    24X7 ಚಿಕಿತ್ಸೆ : ಹಬ್ಬದ ಸಮಯದಲ್ಲಿ 24X7 ಚಿಕಿತ್ಸೆ ನೀಡಲು ಬೆಂಗಳೂರಿನ ಮಿಂಟೊ ಮತ್ತು ವಿಕ್ಟೋರಿಯಾ ಆಸ್ಪತ್ರೆಗಳು ಸಜ್ಜಾಗಿವೆ. ಪಟಾಕಿ ಸಿಡಿತದಿಂದ ಗಾಯಗೊಂಡು ಚಿಕಿತ್ಸೆಗೆ ಬರುವ ಮಕ್ಕಳಿಗಾಗಿ ಆಸ್ಪತ್ರೆ 15 ಬೆಡ್​​ಗಳಿರುವ ಪ್ರತ್ಯೇಕ ವಾರ್ಡ್ ಆರಂಭಿಸಿದೆ. ಯುವಕರಿಗೆ 10 ಬೆಡ್, ಮಹಿಳೆಯರಿಗೆ 10 ಬೆಡ್ ಸೇರಿದಂತೆ ಒಟ್ಟು 35 ಬೆಡ್​ಗಳನ್ನ ಮೀಸಲಿವೆ.  ತುರ್ತು ಚಿಕಿತ್ಸೆಗೆ ಬೇಕಾದ ಸಿದ್ಧತೆಗಳನ್ನೂ ಮಾಡಿಕೊಂಡಿದ್ದು, ಔಷಧಿಗಳನ್ನು, ಐ ಡ್ರಾಪ್ಸ್ ಎಲ್ಲವನ್ನು ವಾರ್ಡ್​ಗಳಲ್ಲಿ ಶೇಖರಿಸಿದೆ.

    ತುರ್ತು ಸಹಾಯವಾಣಿ – 9481740137, 08026707176 ಶುರು ಮಾಡಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts