More

    ಬೆಂಗಳೂರಿನಲ್ಲಿ ಚುಮು ಚುಮು ಚಳಿ…ವಾರಾಂತ್ಯದಲ್ಲಿ ರಾಜ್ಯದ ಹಲವೆಡೆ ಮಳೆ ನಿರೀಕ್ಷೆ

    ಬೆಂಗಳೂರು: ಕಳೆದ ಎರಡು ದಿನಗಳಿಂದ ತಾಪಮಾನ ಕುಸಿದಿದೆ. ವಿಶೇಷವಾಗಿ ಮುಂಜಾನೆ ಹಾಗೂ ಸಂಜೆ ವೇಳೆ ಥಂಡಿ ಗಾಳಿ ಬೀಸುತ್ತಿದೆ. ಈಗಾಗಲೇ ಎಲ್ಲೆಡೆ ಚಳಿ ಹೆಚ್ಚಾಗಿದ್ದು, ಜನರು ಸ್ವೆಟರ್ ಅಥವಾ ಬೆಚ್ಚಗಿನ ಉಡುಪುಗಳನ್ನು ಧರಿಸಿ ಓಡಾಡುತ್ತಿರುವುದು ಕಂಡುಬರುತ್ತಿದೆ. ಹಗಲು ವೇಳೆ ಮೋಡ ಕವಿದ ವಾತವರಣ, ಸಂಜೆಯ ತನಕ ಬಿಸಿಲಿದ್ದರೂ ಚಳಿಯ ಅನುಭವ ಹೆಚ್ಚಾಗುತ್ತಿದೆ. ತಜ್ಞರ ಪ್ರಕಾರ, ಜನವರಿ ವೇಳೆಗೆ ಉಷ್ಣಾಂಶ ಮತ್ತಷ್ಟು ಕುಸಿಯಲಿದೆ. 

    ಕಳೆದ ವಾರ ಎಚ್​​​​ಎಎಲ್, ಬೆಂಗಳೂರು ನಗರ ಪ್ರದೇಶ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿರುವ ವೀಕ್ಷಣಾಲಯಗಳ ಮೂರು ತಾಪಮಾನ ಕೇಂದ್ರಗಳಲ್ಲೂ ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್​​​ ದಾಖಲಾಗಿದೆ. ಗುರುವಾರ ಹಾಗೂ ಶುಕ್ರವಾರ 15-17 ಡಿಗ್ರಿ ಸೆಲ್ಸಿಯಸ್​​​ ಆಸುಪಾಸಿನಲ್ಲಿದೆ.

    ಇನ್ನು ಡಿಸೆಂಬರ್ 17ರಿಂದ ಕರ್ನಾಟಕದ 18ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರವಾಳಿ ಪ್ರದೇಶಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಜತೆಗೆ ಬಯಲುಸೀಮೆ ಭಾಗಗಳಾದ ಬಾಗಲಕೋಟೆ, ಬೆಳಗಾವಿ, ರಾಯಚೂರು, ವಿಜಯಪುರ ಹಾಗೂ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

    ಪಠ್ಯದಲ್ಲಿ ಮತ್ತೆ ಟಿಪ್ಪು?; ಸಂಕ್ರಾಂತಿಗೆ ಪರಿಷ್ಕೃತ ಪಠ್ಯಕ್ರಮ ಸಿದ್ಧ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts