More

    ರಾಜ್ಯದ ಸರ್ಕಾರಿ ನೌಕರರಿಗೆ ಗುಡ್​ ನ್ಯೂಸ್​: ಜನವರಿ 1 ರಿಂದಲೇ ಜಾರಿಗೆ ಬರುವಂತೆ ತುಟ್ಟಿ ಭತ್ಯೆ ಹೆಚ್ಚಳ

    ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರಿಗೆ ಯುಗಾದಿ ಕೊಡುಗೆಯಾಗಿ ತುಟ್ಟಿಭತ್ಯೆ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೇಡಿಕೆ ಇಟ್ಟ ಬೆನ್ನಲ್ಲೇ ಸಕಾರಾತ್ಮಕ ಪ್ರತಿಕ್ರಿಯೆ ನೀಡಿರುವ ರಾಜ್ಯ ಸರ್ಕಾರ ತುಟ್ಟಿ ಭತ್ಯೆಯನ್ನು ಹೆಚ್ಚಿಸಿದೆ.

    ಈ ಸಂಬಂಧ ಇಂದು (ಏ.5) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟ್ವೀಟ್​ ಮಾಡಿದ್ದು, ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸರ್ಕಾರ 1447 ಕೋಟಿ ರೂ. ವಾರ್ಷಿಕ ವೆಚ್ಚ ಭರಿಸಲಿದೆ. ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.

    ಅಖಿಲ ಭಾರತ ಬೆಲೆ ಸೂಚ್ಯಂಕವನ್ನಾಧರಿಸಿ ಕೇಂದ್ರ ಸರ್ಕಾರವು ತನ್ನ ನೌಕರರಿಗೆ ತುಟ್ಟಿಭತ್ಯೆ ಮಂಜೂರು ಮಾಡಿದ ದಿನಾಂಕದಿಂದಲೇ ಪೂರ್ವಾನ್ವಯವಾಗಿ ಕರ್ನಾಟಕ ಸರ್ಕಾರವೂ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಮಂಜೂರು ಮಾಡುವುದು ಸಂಪ್ರದಾಯ. ಪ್ರಸ್ತುತ ಕೇಂದ್ರ ಸರ್ಕಾರವು ಅಖಿಲ ಭಾರತ ಬೆಲೆ ಸೂಚ್ಯಂಕವನ್ನಾಧರಿಸಿ 2022ರ ಜ.1ರಿಂದ ಪೂರ್ವಾನ್ವಯವಾಗಿ ತನ್ನ ನೌಕರರಿಗೆ ಶೇ.3 ತುಟ್ಟಿಭತ್ಯೆ ಮಂಜೂರು ಮಾಡಿ ಉಲ್ಲೇಖಿತ ಆದೇಶವನ್ನು ಹೊರಡಿಸಿದೆ. ಆದ್ದರಿಂದ ಪ್ರಸ್ತುತ ಅಖಿಲ ಭಾರತ ಬೆಲೆ ಸೂಚ್ಯಂಕವನ್ನಾಧರಿಸಿ ರಾಜ್ಯ ಸರ್ಕಾರಿ ನೌಕರರಿಗೆ ಯುಗಾದಿ ಹಬ್ಬದ ಕೊಡುಗೆಯಾಗಿ ಈ ವರ್ಷದ ಜ. 1ರಿಂದ ಪೂರ್ವಾನ್ವಯ ಆಗುವಂತೆ ಶೇ. 3 ತುಟ್ಟಿಭತ್ಯೆ ಬಿಡುಗಡೆಗೊಳಿಸಿ ಆದೇಶ ಹೊರಡಿಸಬೇಕು ಎಂದು ಮುಖ್ಯಮಂತ್ರಿಯವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಪತ್ರಮುಖೇನ ಮನವಿ ಮಾಡಿಕೊಂಡಿದ್ದರು.

    ಪ್ರೀತಿಸಿ ಮದ್ವೆಯಾದ 7 ದಿನಕ್ಕೇ ಯುವತಿ ಬೀದಿಪಾಲು! 3 ದಿನದಲ್ಲಿ 2 ಬಾರಿ ಮದ್ವೆ ಆಗಿದ್ದವ ಇದ್ದಕ್ಕಿದ್ದಂತೆ ಏನಾದ?

    16 ವರ್ಷದ ವಿದ್ಯಾರ್ಥಿ ಮನೆಯ ಟಾಯ್ಲೆಟ್​ ಒಳಹೊಕ್ಕ ಶಿಕ್ಷಕಿಗೆ ಹಲವು ವರ್ಷದ ಭಯಾನಕ ರಹಸ್ಯ ಬಯಲು!

    ಮಿದುಳಿನ ರಕ್ತನಾಳ ಛಿದ್ರಛಿದ್ರ… ಜಿಮ್​ನಲ್ಲೇ ಮೃತಪಟ್ಟ ಮಹಿಳೆಯ ಮರಣೋತ್ತರ ವರದಿಯಲ್ಲಿದೆ ಸ್ಫೋಟಕ ಮಾಹಿತಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts