More

    ಕರ್ನಾಟಕ ಬಂದ್​; ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಮನವಿ ಸಲ್ಲಿಸಿದ ಕನ್ನಡ ಪರ ಸಂಘಟನೆ ಕಾರ್ಯಕರ್ತರು

    ಬೆಂಗಳೂರು: ಸರೋಜಿನಿ‌ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್​​ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.

    ಸರೋಜಿನಿ ಮಹಿಷಿ ವರದಿ ಜಾರಿಗೊಳಿಸುವ ಮೂಲಕ ಕನ್ನಡಿಗರಿಗೆ ಉದ್ಯೋಗಾವಕಾಶ ನಿಡಬೇಕು ಎಂದು ಅವರು ಮುಖ್ಯಮಂತ್ರಿಯನ್ನು ಒತ್ತಾಯಿಸಿದರು.

    ಬೆಳಗಾವಿ, ಹುಬ್ಬಳ್ಳಿ, ದಾವಣಗೆರೆ, ಕೊಡಗು, ಚಿಕ್ಕಮಗಳೂರು, ಯಾದಗಿರಿ ಜಿಲ್ಲೆಗಳ ಸೇರಿ ವಿವಿಧ ಜಿಲ್ಲೆಗಳಲ್ಲಿ ಬಂದ್​ ಅಷ್ಟಾಗಿ ಪರಿನಾಮ ಬೀರಿಲ್ಲ. ಜಿಲ್ಲೆಗಳಲ್ಲಿ ಜನ ಜೀವನ ಮತ್ತು ವಾಹನಗಳ ಓಡಾಟ ಎಂದಿನಂತೆ ಸಾಗಿದೆ.

    ಜಿಲ್ಲೆಗಳಲ್ಲಿ ಬಂದ್​ಗೆ ಸಂಘಟನೆಗಳು ಬೆಂಬಲ ನೀಡಿಲ್ಲ. ಬಸ್, ಆಟೋ, ಖಾಸಗಿ ವಾಹನಗಳ ಸಂಚಾರ ಸಾಮಾನ್ಯವಾಗಿದೆ. ಅಂಗಡಿ, ಹೋಟೆಲ್ ವ್ಯಾಪಾರ ವಹಿವಾಟು ಎಂದಿನಂತೆ ನಡೆದಿವೆ.

    ದಾವಣಗೆರೆ ಸೇರಿ ಹಲವು ಜಿಲ್ಲೆಗಳಲ್ಲಿ ಬಂದ್​ ನಡೆಯದಿದ್ದರೂ ಕನ್ನಡ ಪರ ಸಂಘಟನೆಗಳು ಪ್ರತಿಭಡನಾ ಮೆರವಣೆಗೆ ನಡೆಸಿದವು. ದಾವಣಗೆರೆಯ ಜಯದೇವ ವೃತ್ತದಲ್ಲಿ ರೈತ ಸಂಘ, ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ಮೆರವಣಿಗೆ ನಡೆದಿದೆ. 1986ರಿಂದ ಈವರೆಗಿನ ಸಿಎಂಗಳ ಭಾವಚಿತ್ರ ಹಿಡಿದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts