More

  ಮುಖ್ಯಮಂತ್ರಿ ಸಿದ್ದರಾಮಯ್ಯ ಜನತಾ ದರ್ಶನ ಇದೇ ನ.27ಕ್ಕೆ

  ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 27 ರಂದು ಬೆಳಗ್ಗೆ 9.30 ರಿಂದ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. 

  ಜನರ ಬಳಿಗೇ ಆಡಳಿತ ಕೊಂಡೊಯ್ಯುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಪ್ರತಿ ತಿಂಗಳು ಜನತಾ ದರ್ಶನ ನಡೆಸುವಂತೆ ಸೂಚಿಸಿದ್ದರು.

  ಕಳೆದ ತಿಂಗಳೇ ಮುಖ್ಯಮಂತ್ರಿಗಳ ಜನತಾದರ್ಶನ ನಿಗದಿಯಾಗಿತ್ತಾದರೂ ಮುಖ್ಯಮಂತ್ರಿಗಳ ಕಾರ್ಯ ಒತ್ತಡದಿಂದ ಜನತಾದರ್ಶನವನ್ನು ಮುಂದೂಡಲಾಗಿತ್ತು. ಎಐಸಿಸಿ ನಾಯಕರು ದೆಹಲಿಯಲ್ಲಿ ರಾಜ್ಯ ಸರ್ಕಾರದ ಎಲ್ಲಾ ಸಚಿವರ ಸಭೆ ಕರೆದ ಹಿನ್ನೆಲೆಯಲ್ಲಿ ಜನತಾದರ್ಶನವನ್ನು ಮುಂದೂಡಲಾಗಿತ್ತು. ಮುಂದೂಡಲಾಗಿದ್ದ ಮುಖ್ಯಮಂತ್ರಿಗಳ ಜನತಾದರ್ಶನ ಈ ತಿಂಗಳ 27 ರಂದು ನಡೆಯಲಿದೆ.

  ಮುಖ್ಯಮಂತ್ರಿಗಳ ಸೂಚನೆಯಂತೆ ಹಲವು ಜಿಲ್ಲಾ ಉಸ್ತುವಾರಿ ಸಚಿವರುಗಳು ತಮ್ಮ ಜಿಲ್ಲೆಗಳಲ್ಲಿ ಜನತಾದರ್ಶನ ನಡೆಸಿ ಜನರ ಅಹವಾಲುಗಳನ್ನು ಆಲಿಸಿದ್ದರು. ಇದೀಗ ಸ್ವತಃ ಮುಖ್ಯಮಂತ್ರಿಯವರು ಬೆಂಗಳೂರಿನಲ್ಲಿ ಜನತಾ ದರ್ಶನ ನಡೆಸಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಬಗೆಹರಿಸಲು ಕ್ರಮ ಕೈಗೊಳ್ಳಲಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ ಅವರು ನಡೆಸುತ್ತಿದ್ದ ಜನತಾ ದರ್ಶನಗಳು ಭಾರೀ ಜನಪ್ರಿಯತೆ ಗಳಿಸಿತ್ತು. ಅಲ್ಲದೇ  ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿದ್ದವು. 

  ಜಾತಿಗಣತಿ: ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಜಯಪ್ರಕಾಶ್ ಹೆಗ್ಡೆ ಮರು ನೇಮಕ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts