ಲೇಡಿಸ್ ಟಾಯ್ಲೆಟ್​ಗೆ ನುಗ್ಗಿ ವಿದ್ಯಾರ್ಥಿನಿ ಜತೆ ಅಸಭ್ಯ ವರ್ತನೆ: ಕಾಲೇಜಿನ ಮುಂಭಾಗ ವಿದ್ಯಾರ್ಥಿಗಳ ಪ್ರತಿಭಟನೆ

Student Protest
Published on

ಬೆಂಗಳೂರು: ಕಾಮುಕನೊಬ್ಬ ಲೇಡಿಸ್​ ಟಾಯ್ಲೆಟ್​ ಒಳಗೆ ನುಗ್ಗಿದ ಘಟನೆ ನಿನ್ನೆ (ಜ.10) ಬೆಳಗ್ಗೆ 8 ಗಂಟೆ ಸುಮಾರಿಗೆ ಜಯನಗರದ ವಿಜಯ ಕಾಲೇಜಿನಲ್ಲಿ ನಡೆದಿದೆ.

ನಿನ್ನೆ ವಿದ್ಯಾರ್ಥಿನಿಯೊಬ್ಬರು ಶೌಚಾಗೃಹದ ಒಳಗೆ ಹೋಗಿದ್ದಾರೆ. ಈ ವೇಳೆ ಅದೇ ಶೌಚಗೃಹದ ಒಳಗಡೆ ಯುವಕನೊಬ್ಬ ನುಗ್ಗಿದ್ದಾನೆ. ಬಳಿಕ ವಿದ್ಯಾರ್ಥಿನಿಯ ಜೊತೆ ಆತ ಅಸಭ್ಯ‌ವಾಗಿ ವರ್ತಿಸಿದ್ದಾನೆ. ತಕ್ಷಣ ವಿದ್ಯಾರ್ಥಿನಿ ಕಿರುಚಲು ಶುರು ಮಾಡಿದಾಗ, ಆತ ಗಾಬರಿಯಿಂದ ಟಾಯ್ಲೆಟ್​ನ ಬಾಗಿಲು ಹಾಕಿಕೊಂಡು ಅಲ್ಲಿಂದ ಪರಾರಿಯಾಗಿದ್ದಾನೆ.

ವಿದ್ಯಾರ್ಥಿನಿಯನ್ನು ಟಾಯ್ಲೆಟ್ ರೂಂನಲ್ಲೇ ಲಾಕ್‌ ಮಾಡಿ ಓಡಿ ಹೋಗಿದ್ದ. ಇದೀಗ ಈ ಘಟನೆ ಕಾಲೇಜು ವಿದ್ಯಾರ್ಥಿನಿಯರಲ್ಲಿ ಆತಂಕ ಸೃಷ್ಟಿಸಿದ್ದು, ಘಟನೆಯನ್ನು ವಿರೋಧಿಸಿ ಇಂದು ಪ್ರತಿಭಟನೆ ನಡೆಸಿದ್ದಾರೆ. ಹೊರಗಡೆಯಿಂದ ಕಾಲೇಜಿಗೆ ಯಾರೋ ಬಂದಿದ್ದಾರೆ ಎಂದು ಆರೋಪಿಸಿ ಕಾಲೇಜಿನ ಮುಂಭಾಗದಲ್ಲಿ ಪ್ರತಿಭಟನೆ ಮಾಡಿದ್ದಾರೆ.

ವಿದ್ಯಾರ್ಥಿಗಳ ಪ್ರತಿಭಟನೆಗೆ ಹೆದರಿದ ಕಾಲೇಜಿನ ಆಡಳಿತ ಮಂಡಳಿ ಜಯನಗರ ಪೊಲೀಸರಿಗೆ ದೂರು ನೀಡಿದೆ. ಪ್ರಕರಣ ದಾಖಲಿಸಿಕೊಂಡಿರುವ ಜಯನಗರ ಪೊಲೀಸರು ತನಿಖೆ ಆರಂಭಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net