ಬೆಂಗಳೂರು : ಬೆಂಗಳೂರಿನ ಸದಾಶಿವನಗರದ ಮನೆಯಲ್ಲಿ ಹೂವಿನ ಕುಂಡದಲ್ಲಿ ಗಾಂಜಾ ( Marijuana ) ಗಿಡ ಬೆಳೆಸಿದ್ದ ನೇಪಾಳ ಮೂಲದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಊರ್ಮಿಳಾ ಮತ್ತು ಗುರುಂಗ್ ಎಂಬ ದಂಪತಿ ವಿರುದ್ಧ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 54 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಊರ್ಮಿಳಾ ಮನೆಯ ಬಾಲ್ಕನಿಯಲ್ಲಿ ರೀಲ್ಸ್ ಮಾಡಿ ಪೋಸ್ಟ್ ಮಾಡಿದ್ದಳು. ಊರ್ಮಿಳಾ ಮಾಡಿದ್ದ ರೀಲ್ಸ್ನಲ್ಲಿ ಗಾಂಜಾ ಗಿಡ ಕಾಣಿಸಿಕೊಂಡಿದೆ. ಗಾಂಜಾ ಗಿಡ ಕುರಿತು ವ್ಯಕ್ತಿಯೋರ್ವ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.
ಹೂವಿನ ಗಿಡಗಳ ಮಧ್ಯೆ ದಂಪತಿ ಗಾಂಜಾ ಗಿಡ ಬೆಳೆಸಿದ್ದರು. 54 ಗ್ರಾಂ ಗಾಂಜಾ ಸೊಪ್ಪನ್ನು ಸದಾಶಿವನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎಂಎಸ್‌ಆರ್ ನಗರದ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿರುವ ದಂಪತಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ.
ಧೋ ಎಂದು ಸುರಿಯುವ ಮಳೆಯಲ್ಲೂ ತರಕಾರಿ ಮಾರುತ್ತಿದ್ದ ವೃದ್ಧೆ! Video Viral
TAGGED:Marijuana