More

    ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ 20 ವರ್ಷ ಜೈಲು ಶಿಕ್ಷೆ

    ಬೆಂಗಳೂರು: ಮನೆಯಲ್ಲಿ ಕೂಡಿ ಹಾಕಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.

    ಗೊಟ್ಟಿಗೆರೆ ಬಿ.ಜಿ ರಸ್ತೆ ವೀವರ್ಸ್‌ ಕಾಲನಿ ನಿವಾಸಿ ಪೆರಿಯಾಸ್ವಾಮಿ ಅಪರಾಧಿ. 20 ವರ್ಷ ಜೈಲು, 20 ಸಾವಿರ ರೂ. ದಂಡ ವಿಧಿಸಿ ನ್ಯಾಯಾಧೀಶರಾದ ಇಷ್ರತ್ ಜಹಾನ್ ತೀರ್ಪು ನೀಡಿದ್ದಾರೆ. ನೊಂದ ಬಾಲಕಿಗೆ 4 ಲಕ್ಷ ರೂ. ಸರ್ಕಾರದಿಂದ ಮತ್ತು ದಂಡದ ಮೊತ್ತ 20 ಸಾವಿರ ರೂ. ಸಹ ಬಾಲಕಿಗೆ ನೀಡುವಂತೆ ಆದೇಶದಲ್ಲಿ ಉಲ್ಲೇಖಿಸಿದ್ದಾರೆ. ಸರ್ಕಾರಿ ಅಭಿಯೋಜಕಿ ಗೀತಾ ರಾಮಕೃಷ್ಣ ಗೊರವರ ವಾದ ಮಂಡಿಸಿದ್ದರು.

    2020ರ ಫೆಬ್ರವರಿ 10ರ ಬೆಳಗ್ಗೆ ಮನೆಯಲ್ಲಿ ಅಪ್ರಾಪ್ತ ಸಹೋದರಿಯರು ಇದ್ದಾಗ ಪೆರಿಯಾಸ್ವಾಮಿ ಮನೆಗೆ ಬಂದಿದ್ದಾನೆ. ಒಬ್ಬಾಕೆಗೆ ಕಾಸು ಕೊಟ್ಟು ಅಂಗಡಿಗೆ ಕಳುಹಿಸಿ ಮತ್ತೊಬ್ಬಳ ಮೇಲೆ ಅತ್ಯಾಚಾರ ಎಸಗಿದ್ದ. ಈ ಬಗ್ಗೆ ಸಂತ್ರಸ್ತೆ ಪಾಲಕರು ಕೊಟ್ಟ ದೂರಿನ ಮೇರೆಗೆ ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಪೆರಿಯಾಸ್ವಾಮಿಯನ್ನು ಬಂಧಿಸಿ ಕೋರ್ಟ್‌ಗೆ ಆರೋಪಪಟ್ಟಿ ಸಲ್ಲಿಸಿದ್ದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ತೀರ್ಪು ನೀಡಿದೆ.

    ಬೆಂಗಳೂರಿನಲ್ಲಿ ಮಾ.23 ರಿಂದ 30ರ ತನಕ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

    ಹದ್ದಿನಂತೆ ತೀಕ್ಷ್ಣ ದೃಷ್ಟಿಯುಳ್ಳವರು ಮಾತ್ರ ಈ ಫೋಟೋದಲ್ಲಿರುವ ನಾಯಿ ಪತ್ತೆಹಚ್ಚಲು ಸಾಧ್ಯ!

    ಬೈಕ್ ಹಾಗೂ ಆ್ಯಂಬುಲೆನ್ಸ್ ನಡುವೆ ಭೀಕರ ಅಪಘಾತ; ದ್ವಿಚಕ್ರ ಸವಾರ ಮೃತ್ಯು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts