ಸ್ಥಳೀಯ ಸಂಸ್ಥೆಗಳ ಚುನಾವಣಾ ದಿನಾಂಕ ಪ್ರಕಟ

ಬೆಂಗಳೂರು: 105 ಸ್ಥಳೀಯ ಸಂಸ್ಥೆಗಳ ಚುನಾವಣಾ ವೇಳಾಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಗುರುವಾರ ಪ್ರಕಟಸಿದೆ.

29 ನಗರಸಭೆ, 53 ಪುರಸಭೆ, 23 ಪಟ್ಟಣ ಪಂಚಾಯಿತಿಗಳಿಗೆ ಆಗಸ್ಟ್​. 29 ರಂದು ಚುನಾವಣೆ ನಡೆಯಲಿದೆ. ಆ.10ರಂದು ಅಧಿಸೂಚನೆ ಹಾಗೂ ಆ.17ರಿಂದ ನಾಮಪತ್ರ ಸಲ್ಲಿಸಬಹುದಾಗಿದೆ. ನಾಮಪತ್ರ ಹಿಂತೆಗೆದುಕೊಳ್ಳಲು ಆ.20 ಕೊನೆಯ ದಿನವಾಗಿದ್ದು, ಆಗಸ್ಟ್​ 31ರಂದು ಮರುಮತದಾನಕ್ಕೆ ಅವಕಾಶ ನೀಡಲಾಗಿದೆ.

ಸೆ.1ರಂದು ಮತ ಎಣಿಕೆ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ. ಇಂದಿನಿಂದಲೇ ಸೆಪ್ಟೆಂಬರ್ 1 ರ ವರೆಗೂ​ ನೀತಿಸಂಹಿತೆ ಜಾರಿಯಲ್ಲಿರುತ್ತದೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತರು ಪಿ.ಎನ್ ಶ್ರೀನಿವಾಸಾಚಾರಿ ತಿಳಿಸಿದ್ದಾರೆ. (ದಿಗ್ವಿಜಯ ನ್ಯೂಸ್​)