Bomb: ಬೆಂಗಳೂರಿಗೆ ಬರುತ್ತಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ: ದೆಹಲಿಯಲ್ಲಿ ತುರ್ತು ಭೂಸ್ಪರ್ಶ

Akasa Air
Published on

ನವದೆಹಲಿ: ದೆಹಲಿಯಿಂದ ಬೆಂಗಳೂರಿಗೆ ಹೊರಟಿದ್ದ ಆಕಾಶ ಏರ್​ಲೈನ್​ ಫ್ಲೈಟ್ ಕ್ಯೂಪಿ 1335 ಗೆ ಬಾಂಬ್​(Bomb) ಬೆದರಿಕೆ ಬಂದ ಹಿನ್ನೆಲೆಯಲ್ಲಿ ವಿಮಾನ ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಾಪಸ್​ ಆಗಿ ತುರ್ತು ಭೂಸ್ಪರ್ಶ ಮಾಡಿದೆ.

ವಿಮಾನದಲ್ಲಿ 174 ಪ್ರಯಾಣಿಕರಿದ್ದರು. ಮೂವರು ಮಕ್ಕಳು ಮತ್ತು ಏಳು ಸಿಬ್ಬಂದಿ ಸಹ ಇದ್ದರು. ದೆಹಲಿಯಲ್ಲಿ ಸುರಕ್ಷಿತವಾಗಿ ಇಳಿಯಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಯಿತು ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

7 ವಿಮಾನಗಳಿಗೆ ಬಾಂಬ್‌ ಬೆದರಿಕೆ:

ಇತ್ತೀಚೆಗೆ ದೇಶದ ಏಳು ವಿಮಾನಗಳಿಗೆ ಬಾಂಬ್ ಬೆದರಿಕೆ ಬಂದಿತ್ತು. ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಬೆದರಿಕೆ ಬಂದಿತ್ತು. ಆದರೆ, ಈ ಬೆದರಿಕೆ ಹುಸಿ ಎಂದು ತಿಳಿದುಬಂದಿದೆ. ಈ ವಿಮಾನಗಳಲ್ಲಿ ಬಾಂಬ್‌ಗಳನ್ನು ಇರಿಸಲಾಗಿತ್ತು ಎಂದು ಏಕ್ಸ್ ಹ್ಯಾಂಡಲ್ ಹೇಳಿಕೊಂಡಿತ್ತು. ಕಳೆದ ಸೋಮವಾರ(ಅ.14) ಮೂರು ಅಂತರಾಷ್ಟ್ರೀಯ ವಿಮಾನಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿತ್ತು.

ಇಂಡಿಗೋ ಏರ್‌ಲೈನ್ಸ್‌ನ ಎರಡು ಅಂತಾರಾಷ್ಟ್ರೀಯ ವಿಮಾನಗಳಿಗೆ ಮುಂಬೈ ವಿಮಾನ ನಿಲ್ದಾಣದಲ್ಲಿ ಬಾಂಬ್‌ ಬೆದರಿಕೆ ಹಾಕಲಾಗಿತ್ತು. ಇದೇ ವೇಳೆ ಮುಂಬೈನಿಂದ ನ್ಯೂಯಾರ್ಕ್ ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೂ ಬಾಂಬ್ ಬೆದರಿಕೆ ಹಾಕಲಾಗಿತ್ತು. ಬೆದರಿಕೆ ಬಂದ ನಂತರ ಏರ್ ಇಂಡಿಯಾ ವಿಮಾನವನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net