

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮಂಗಳವಾರ ಸಂಜೆ ಸುರಿದ ಭಾರಿ ಮಳೆಗೆ ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಮಹಿಳೆಯರು ಬಲಿಯಾಗಿದ್ದಾರೆ.
ಬೊಮ್ಮನಹಳ್ಳಿ ಸಮೀಪದ ಬೇಗೂರಿನಲ್ಲಿ ಸ್ಕೂಟಿ ಮೇಲೆ ಹೋಗುತ್ತಿದ್ದ ಹೇಮಾ (49) ಅವರ ಮೇಲೆ ಭಾರಿ ಮರ ಉರುಳಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುತ್ತಮುತ್ತಲಿನ ಜನ ಈ ಮಹಿಳೆಯ ಸಹಾಯಕ್ಕೆ ಧಾವಿಸಿ ಬಂದರೂ ಪ್ರಯೋಜನವಾಗಲಿಲ್ಲ.
ನಂದಿನಿ ಲೇಟೌಟ್ ರಾಮಣ್ಣ ಬ್ಲಾಕ್ನಲ್ಲಿ ನಡೆದ ಇನ್ನೊಂದು ಘಟನೆಯಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಸಿಮೆಂಟ್ ಇಟ್ಟಿಗೆ ಬಿದ್ದು ಶಿಲ್ಪಾ (22) ಎಂಬ ಯುವತಿ ಸಾವಿಗೀಡಾಗಿದ್ದಾರೆ.
ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ನಿರ್ಮಾಣ ಹಂತದಲ್ಲಿದ್ದ ಕಟ್ಟಡದಿಂದ ಇಟ್ಟಿಗೆಗಳು ಪಕ್ಕದ ಮನೆಯ ಮೇಲೆ ಬಿದ್ದು, ದುರ್ಘಟನೆ ಸಂಭವಿಸಿದೆ.