ಬೆಂಗಳೂರಿನಲ್ಲಿ ಹಿಟ್‌ ಅಂಡ್‌ ರನ್‌ಗೆ ಬೈಕ್‌ ಸವಾರ ಬಲಿ

ಬೆಂಗಳೂರು: ಹಿಟ್ ಅಂಡ್ ರನ್​ಗೆ ಬೈಕ್ ಸವಾರ ಬಲಿಯಾಗಿರುವ ಘಟನೆ ನಾಗರಬಾವಿ ಜಂಕ್ಷನ್‌ ಬಳಿ ಮಂಗಳವಾರ ರಾತ್ರಿ 9 ಗಂಟೆಯಲ್ಲಿ ನಡೆದಿದೆ.

ಹಿಂಬದಿಯಿಂದ ಬೈಕ್​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ರಸ್ತೆಗೆ ಬಿದ್ದಿದ್ದಾನೆ. ಈ ವೇಳೆ ಲಾರಿ ಹರಿದು ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮೃತನನ್ನು ಜಗದೀಶ್ ಎಂದು ಗುರುತಿಸಲಾಗಿದೆ. ಘಟನೆ ನಂತರ ಲಾರಿ ಸಮೇತ ಚಾಲಕ ಪರಾರಿಯಾಗಿದ್ದಾನೆ.

ಕಾಮಾಕ್ಷಿಪಾಳ್ಯ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್)