ಬೆಂಗಳೂರಿನಲ್ಲಿ ಮಾ.23 ರಿಂದ 30ರ ತನಕ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

BNG Film Festival
Published on

ಬೆಂಗಳೂರು: ಬೆಂಗಳೂರಿನಲ್ಲಿ ಮಾ.23 ರಿಂದ 30 ತನಕ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ ಎಂದು ಚಿತ್ರೋತ್ಸವ ಸಂಘಟನಾ ಸಮಿತಿ ಅಧ್ಯಕ್ಷ ಮತ್ತು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

14ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಮಿತಿ ಸಭೆಯ ಬಳಿಕ ಮಾತನಾಡಿ, ಸುಮಾರು 52 ದೇಶಗಳಿಂದ 150 ಚಿತ್ರಗಳು ಭಾಗವಹಿಸಲಿವೆ ಎಂದರು. ಗುಣಮಟ್ಟದ ಚಿತ್ರಗಳ ಆಯ್ಕೆ ಮಾಡಲು ಸೂಚಿಸಲಾಗಿದೆ. ಜೂರಿಗಳ ಆಯ್ಕೆ ಬಗ್ಗೆ ಮಾನದಂಡ ಅನುಸರಿಸಲಾಗುತ್ತದೆ ಎಂದರು.

ವಿಧಾನಸೌಧ ಮುಂಭಾಗದಲ್ಲಿ ಅಂದು ಮುಖ್ಯಮಂತ್ರಿ ಚಿತ್ರೋತ್ಸವಕ್ಕೆ ಚಾಲನೆ ನೀಡುವರು. ರಾಜ್ಯಪಾಲರನ್ನು ಆಹ್ವಾನಿಸಲಾಗುವುದು ಎಂದರು. ಕನ್ನಡದ ಚಿತ್ರಗಳಿಗೆ ಆದ್ಯತೆ ನೀಡಲಾಗುತ್ತದೆ. ಪ್ರಶಸ್ತಿಗೆ ಆಯ್ಕೆಯಾದ ಚಿತ್ರಗಳಿಗೆ ಪ್ರಶಸ್ತಿ ಮೊತ್ತ ಹೆಚ್ಚು ಮಾಡಲು ನಿರ್ಧರಿಸಲಾಗಿದೆ ಎಂದರು.

ಚಿತ್ರೋತ್ಸವದಲ್ಲಿ ವಿಚಾರ ಸಂಕಿರಣ, ಚರ್ಚೆ, ಸಂವಾದ ನಡೆಯಲಿವೆ. ಈ ಬಾರಿಯೂ 4.48 ಕೋಟಿ ರೂ. ಅನುದಾನವನ್ನು ಸಿಎಂ ಬಿಡುಗಡೆ ಮಾಡಿದ್ದಾರೆ ಎಂದರು.

ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ವಾರ್ತಾ ಇಲಾಖೆಯ ಆಯುಕ್ತ ಡಾ.ಪಿ.ಎಸ್.ಹರ್ಷ, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಅಶೋಕ್ ಕಶ್ಯಪ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net