ಜಯನಗರ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುತ್ತೇನೆ: ಸೌಮ್ಯಾ ರೆಡ್ಡಿ

ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಭರ್ಜರಿ ಜಯಭೇರಿ ಬಾರಿಸಿದ ಕಾಂಗ್ರೆಸ್​ ಅಭ್ಯರ್ಥಿ ಸೌಮ್ಯಾ ರೆಡ್ಡಿ ಅವರು ಕ್ಷೇತ್ರದ ಮತದಾರರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಗೆಲುವಿನ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜನರು ಆಶೀರ್ವಾದ ಮಾಡುತ್ತಾರೆಂಬ ವಿಶ್ವಾಸವಿತ್ತು. ಸುಮಾರು 6 ತಿಂಗಳಿನಿಂದ ಜನರ ಕಷ್ಟ-ಸುಖ ಅರಿತಿದ್ದೇನೆ. ಮುಂದಿನ ದಿನಗಳಲ್ಲಿ ಕ್ಷೇತ್ರದ ಜನರ ಸಮಸ್ಯೆಗಳನ್ನು ಪರಿಹಾರ ಮಾಡುತ್ತೇನೆ ಎಂದರು.

ಜನರ ಸೇವೆ ಮಾಡಿ, ಜಯನಗರ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುತ್ತೇನೆ. ನಾನು ಒಬ್ಬ ಶಾಸಕಿಯಾಗಿ ಕೆಲಸ ಮಾಡುವುದು ನನಗೆ ಖುಷಿ ತಂದಿದೆ ಎಂದು ಕ್ಷೇತ್ರದ ಜನರಿಗೆ ಅಭಿನಂದನೆ ಸಲ್ಲಿಸುವುದರೊಂದಿಗೆ ಸಂಭ್ರಮಿಸಿದರು. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *