Thursday, 13th December 2018  

Vijayavani

ಕಬ್ಬು ದರ ಬಾಕಿ ನೀಡಲು ರೈತರ ಆಗ್ರಹ -ಸುವರ್ಣ ಸೌಧದಕ್ಕೆ ಮುತ್ತಿಗೆ ಯತ್ನ - ಪೊಲೀಸರೊಂದಿಗೆ ಅನ್ನದಾತರ ಜಟಾಪಟಿ        ರಾಜಸ್ಥಾನ ಸಿಎಂ ಆಗಿ ಗೆಹ್ಲೋಟ್ ಹೆಸರು ಫೈನಲ್ - ರಾಹುಲ್ ಆಪ್ತ ಸಚಿನ್ ಪೈಲಟ್​ಗೆ ಡಿಸಿಎಂ ಪಟ್ಟ - ಅಧಿಕೃತ ಘೋಷಣೆ ಬಾಕಿ        ಬಳ್ಳಾರಿಯ ಮೈಲಾರದಲ್ಲಿ ಗೊರವಯ್ಯನ ಗಲಾಟೆ - ಸಣ್ಣಪ್ಪ ಮಲ್ಲಪ್ಪನವರಿಗೆ ಗೊರವಯ್ಯನ ದೀಕ್ಷೆ ಕೊಟ್ಟಿದ್ದಕ್ಕೆ ವಿರೋಧ         ಟ್ರಿನಿಟಿ ಸರ್ಕಲ್​​ನಲ್ಲಿ ಮೆಟ್ರೋ ಪಿಲ್ಲರ್ ಬಿರುಕು - ಜೀವದ ಜತೆ ಚೆಲ್ಲಾಟ ಬೇಡ - ದಿಗ್ವಿಜಯ ನ್ಯೂಸ್ ಜತೆ ಎಕ್ಸ್​​ಪರ್ಟ್​​ಗಳ ಮಾತು        ತಿರುವನಂತಪುರದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ -ಹಿಂಸಾಚಾರಕ್ಕೆ ಯತ್ನ, ಪೊಲೀಸರಿಂದ ಲಾಠಿಚಾರ್ಜ್       
Breaking News

ಸಿಗರೇಟ್​ ವಿಚಾರಕ್ಕೆ ಕೊಲೆಯಾದ ಅಣ್ಣ-ತಮ್ಮ!

Thursday, 14.06.2018, 7:21 AM       No Comments

ಬೆಂಗಳೂರು: ಕೇವಲ ಸಿಗರೇಟಿಗಾಗಿ ಎರಡು ಭೀಕರ ಕೊಲೆಯಾಗಿರುವ ಘಟನೆ ಕೆ.ಜೆ.ಹಳ್ಳಿ ಠಾಣಾ ವ್ಯಾಪ್ತಿಯ ಗೋವಿಂದಪುರ ಮುಖ್ಯ ರಸ್ತೆಯಲ್ಲಿ ಬುಧವಾರ ರಾತ್ರಿ ನಡೆದಿದೆ.

ಅಮೀನ್(30)​ ಮತ್ತು ಮತೀನ್(32) ಮೃತ ಸಹೋದರರು. ನಿನ್ನೆ ಸಂಜೆ ಏಳು ಗಂಟೆ ಸುಮಾರಿಗೆ ಅಮೀನ್ ರಸ್ತೆ ಬದಿಯ ಪೆಟ್ಟಿಗೆ ಅಂಗಡಿಯಲ್ಲಿ ಸಿಗರೇಟ್ ತೆಗೆದುಕೊಂಡಿದ್ದ. ಆದರೆ, ಹಣ ಕೊಡದೆ ವಾಪಸ್ಸು ಬರುತ್ತಿದ್ದರಿಂದ ಅಂಗಡಿ ಮಾಲೀಕ ಹಣ ಕೊಡುವಂತೆ ಕೇಳಿದ್ದ. ಈ ವೇಳೆ ಅಮೀನ್ ನನ್ನನ್ನೇ ಹಣ ಕೇಳ್ತೀಯಾ ಅಂತ ಅಂಗಡಿ ಮಾಲೀಕನಿಗೆ ಹಿಗ್ಗಾಮಗ್ಗಾ ಥಳಿಸಿದ್ದಾನೆ. ಕೂಡಲೇ ಅಂಗಡಿ ಮಾಲೀಕ ತನ್ನ ಸ್ನೇಹಿತರಿಗೆ ಕರೆ ಮಾಡಿ ನಡೆದ ವಿಚಾರವನ್ನು ಹೇಳಿದ್ದಾನೆ.

ವಿಷಯ ತಿಳಿದಿದ್ದೇ ಮರದ ದೊಣ್ಣೆಯನ್ನು ಹಿಡಿದು ಬಂದ ಅಂಗಡಿ ಮಾಲೀಕನ ಸ್ನೇಹಿತರು ಗೋವಿಂದಪುರದ ಬಿಬಿಎಂಪಿ ಮೈದಾನದ ಬಳಿ ಗಲಾಟೆ ಮಾಡಿದ್ದಾರೆ. ಈ ವೇಳೆ ಅಮೀನ್ ಹಾಗೂ ಆತನ ಸಹೋದರ ಮತೀನ್​ಗೆ ದೊಣ್ಣೆ ಹಾಗೂ ಕಲ್ಲುಗಳಿಂದ ಹೊಡೆದು ಹಲ್ಲೆ ಮಾಡಿದ್ದಾರೆ.

ಗಂಭೀರವಾಗಿ ಗಾಯಗೊಂಡ ಮತೀನ್ ಸ್ಥಳದಲ್ಲೇ ಮೃತಪಟ್ಟರೆ, ಅಮೀನ್​ ನಿಮಾನ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಪ್ರಕರಣ ಸಂಬಂಧ ಕೆ.ಜಿ ಹಳ್ಳಿ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. (ದಿಗ್ವಿಜಯ ನ್ಯೂಸ್​​)

Leave a Reply

Your email address will not be published. Required fields are marked *

Back To Top