More

    ವಿಶ್ವ ವಿಖ್ಯಾತ ಬೆಂಗಳೂರು ಕರಗ ಶಕ್ತ್ಯುತ್ಸವಕ್ಕೆ ಚಾಲನೆ ಇಂದು

    ಬೆಂಗಳೂರು: ಬೆಂಗಳೂರು ಐತಿಹಾಸಿಕ ಕರಗ ಶಕ್ತ್ಯುತ್ಸವ (ಸೋಮವಾರ)ಏ.15 ಆರಂಭವಾಗಲಿದೆ.

    ಇದನ್ನೂ ಓದಿ: ಅಯೋಧ್ಯೆ ಬಾಲರಾಮ ದೇವರ ದರ್ಶನಕ್ಕೆ ವಿಐಪಿ ದರ್ಶನ ನಿಷೇಧ!

    ಏ.15ರ ಧ್ವಜಾರೋಹಣದೊಂದಿಗೆ ಉತ್ಸವಕ್ಕೆ ಚಾಲನೆ ದೊರೆಯಲಿದ್ದು ಈ ಬಾರಿಯೂ ಪೂಜಾರಿ ಎ. ಜ್ಞಾನೇಂದ್ರ ಕರಗ ಹೊರಲಿದ್ದಾರೆ. ಅವರು ಈಗಾಗಲೇ ದೇವಾಲಯ ಸೇರಿದ್ದು ಜ್ಞಾನ, ಯೋಗ ಸೇರಿ ವಿವಿಧ ಧಾರ್ಮಿಕ ಕೈಂಕರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

    ದ್ರೌಪದಿ ಅಮ್ಮನವರ ಸಮೇತ ಶ್ರೀಧರ್ಮರಾಯಸ್ವಾಮಿಯ ಪರಿವಾರವನ್ನು ಹೊತ್ತು ಸಾಗುವ ಬೃಹತ್ ಮರದ ತೇರು ನವೀಕರಣಗೊಂಡು ರಥೋತ್ಸವಕ್ಕೆ ಸಜ್ಜಾಗಿ ನಿಂತಿದೆ. ಉತ್ಸವದ ಯಶಸ್ಸಿಗೆ ವಕ್ಷಿಕುಲ ಕ್ಷತ್ರಿಯ ಸಮಾಜ ಬಾಂಧವರು, ಗೌಡರು, ಗಣಾಚಾರಿಗಳು, ಗಂಟೆ ಪೂಜಾರಿಗಳು, ಚಾಕರೀದಾರರು ಸಿದ್ಧತೆಯಲ್ಲಿ ತೊಡಗಿಕೊಂಡಿದ್ದಾರೆ.

    ಕರಗಕ್ಕೆ ಸೇಲಂ ಮಲ್ಲಿಗೆ ಮೊಗ್ಗನ್ನೇ ಬಳಸಲಾಗುವುದು. ಹೀಗಾಗಿ ಮಲ್ಲಿಗೆ ಮೊಗ್ಗು ಬೆಂಗಳೂರಿಗೆ ಬರಲಿದೆ. ಉತ್ಸವದಲ್ಲಿ ಸಂಪ್ರದಾಯದಂತೆ ಜರಗನಹಳ್ಳಿಯ ಕುಲಬಾಂಧವರು ಪ್ರತಿ ವರ್ಷದಂತೆ ಬಿದಿರಿನ ಮರವನ್ನು ತರಲಿದ್ದು ಅದನ್ನು ದೇವಾಲಯದ ಆವರಣದಲ್ಲಿ ನೆಟ್ಟು ಸೋಮವಾರ ರಾತ್ರಿ ರಥೋತ್ಸವ ಹಾಗೂ ಧ್ವಜಾರೋಹಣ ಮಾಡುವ ಮೂಲಕ ಉತ್ಸವಕ್ಕೆ ಚಾಲನೆ ನೀಡಲಾಗುತ್ತದೆ.

    ಚೈತ್ರಮಾಸ ಶುಕ್ಲ ಪಕ್ಷದ ಸಪ್ತಮಿ ದಿನ ಆರಂಭವಾಗಿ ಬಿದಿಗೆವರೆಗೆ ಉತ್ಸವ ಜರುಗಲಿದೆ. ಏ.23ರ ಚೈತ್ರ ಪೌರ್ಣಮೆ ದಿನವಾದ ಮಂಗಳವಾರ ಶ್ರೀ ಧರ್ಮರಾಯಸ್ವಾಮಿ ಮಹಾರಥೋತ್ಸವ ಹಾಗೂ ಕರಗ ಶಕ್ಕೋತ್ಸವ ವಿಜೃಂಭಣೆಯಿಂದ ಜರುಗಲಿದೆ.

    ಸಲ್ಮಾನ್ ಖಾನ್ ಹೌಸ್ ಫೈರಿಂಗ್: ಇಬ್ಬರು ಶಂಕಿತರ ಬಂಧನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts