More

    ಲೋಕಸಭಾ ಚುನಾವಣೆ 2024: ಮತದಾರನ ಕುಗ್ಗದ ಉತ್ಸಾಹ- ಬೆಳಗ್ಗೆ 9 ಗಂಟೆಯವರೆಗೆ ಶೇ. 9.21 ದಾಖಲೆ ಮತದಾನ!

    ಬೆಂಗಳೂರು: ಬಿಗಿ ಭದ್ರತೆಯ ನಡುವೆ 2 ನೇ ಹಂತದ ಮತದಾನ ಶುಕ್ರವಾರ ಬೆಳಗ್ಗೆ 7 ಗಂಟೆಗೆ ಆರಂಭವಾಗಿದೆ. ಕರ್ನಾಟಕದ 14 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಮತದಾರರು ಅತ್ಯುತ್ಸಾಹದಿಂದ ಮತಗಟ್ಟೆಗಳಿಗೆ ತೆರಳಿ ತಮ್ಮ ಹಕ್ಕು ಚಲಾಯಿಸಿದರು.

    ಇದನ್ನೂ ಓದಿ: ಇವಿಎಂ ಮತಗಳ ಜತೆಗೆ ವಿವಿಪ್ಯಾಟ್​ ಚೀಟಿ ಎಣಿಕೆಗೆ ಕೋರಿದ್ದ ಅರ್ಜಿಗಳು ವಜಾ! ಸುಪ್ರೀಂಕೋರ್ಟ್​ ತೀರ್ಪು

    ಮತದಾನದ ಕಾರಣ, ಶುಕ್ರವಾರ ಬೆಂಗಳೂರು ಮತ್ತು ರಾಜ್ಯದ ಇತರ ಭಾಗಗಳಲ್ಲಿ ಶಾಲೆಗಳು, ಕಚೇರಿಗಳು ಮತ್ತು ಬ್ಯಾಂಕ್‌ಗಳನ್ನು ಮುಚ್ಚಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಸೆಂಟ್ರಲ್, ಬೆಂಗಳೂರು ದಕ್ಷಿಣ, ಮಂಡ್ಯ ಮತ್ತು ಮೈಸೂರು ಸೇರಿದಂತೆ ಕೆಲವು ಪ್ರಮುಖ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದೆ.

    ಈ ಹಂತದ ಚುನಾವಣೆಯ ಪ್ರಮುಖ ಅಭ್ಯರ್ಥಿಗಳಲ್ಲಿ ಮಾಜಿ ಮುಖ್ಯಮಂತ್ರಿ ಜೆಡಿಎಸ್​ನ ಎಚ್‌.ಡಿ. ಕುಮಾರಸ್ವಾಮಿ, ಕಾಂಗ್ರೆಸ್‌ನ ಡಿ.ಕೆ. ಸುರೇಶ್ ಸೇರಿದ್ದಾರೆ. ಬಿಜೆಪಿ ನಾಯಕ ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ, ಕಾಂಗ್ರೆಸ್​ನ ಸೌಮ್ಯಾ ರೆಡ್ಡಿ, ಜೆಡಿಎಸ್​ನ ಪ್ರಜ್ವಲ್ ರೇವಣ್ಣ, ಬಿಜೆಪಿಯ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸೇರಿದ್ದಾರೆ.

    ಬೆಂಗಳೂರಿಗೆ ಆಗಮಿಸಿದ ನಿರ್ಮಲಾ ಸೀತಾರಾಮನ್: ಲೋಕಸಭೆ ಚುನಾವಣೆಗೆ ಮತ ಚಲಾಯಿಸಲು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ತಂದೆಯೊಂದಿಗೆ ಬೆಂಗಳೂರಿನ ಬಿಇಎಸ್ ಮತಗಟ್ಟೆಗೆ ಆಗಮಿಸಿದರು.
    ಸುಧಾ ಮೂರ್ತಿ ಬೆಂಗಳೂರಿನಲ್ಲಿ ಮತ ಚಲಾಯಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ನಾನು ಎಲ್ಲರಿಗೂ ಹೇಳಲು ಬಯಸುತ್ತೇನೆ- ಮನೆಯಲ್ಲಿ ಕುಳಿತುಕೊಳ್ಳಬೇಡಿ, ಹೊರಗೆ ಬಂದು ಮತ ಚಲಾಯಿಸಿ, ನಿಮ್ಮ ನಾಯಕನನ್ನು ಆಯ್ಕೆ ಮಾಡಿ. ಗ್ರಾಮೀಣ ಪ್ರದೇಶದವರಿಗೆ ಹೋಲಿಸಿದರೆ ನಗರ ಪ್ರದೇಶದ ಜನರು ಕಡಿಮೆ ಮತ ಚಲಾಯಿಸುತ್ತಾರೆ ಎಂದು ನಾನು ಯಾವಾಗಲೂ ಭಾವಿಸುತ್ತೇನೆ. ಯುವಕರು ಹೊರಗೆ ಬಂದು ಮತ ಚಲಾಯಿಸುವಂತೆ ನಾನು ವಿನಂತಿಸುತ್ತೇನೆ ಎಂದರು.

    ಚಾಮರಾಜನಗರದ ಸಿದ್ದರಾಮನ ಹುಂಡಿ ಗ್ರಾಮದ ಮತಗಟ್ಟೆಯಲ್ಲಿ ಮತ ಚಲಾಯಿಸಿದ ನಂತರ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಇಂಕ್ ಬೆರಳನ್ನು ತೋರಿಸಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಮತ ಚಲಾಯಿಸಿದರು.

    ‘ಫಾದರ್’ನಲ್ಲಿ ಕೃಷ್ಣನಿಗೆ 2ನೇಬಾರಿ ಜೋಡಿಯಾದ ಅಮೃತಾ ಅಯ್ಯಂಗಾರ್!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts