Tuesday, 20th November 2018  

Vijayavani

ಕಬ್ಬು ಬೆಳಗಾರರ ಜತೆ ಸಿಎಂ ಸಭೆ - ವಿಧಾನಸೌಧಕ್ಕೆ ಆಗಮಿಸಿದ ರೈತ ಮುಖಂಡರು - ಕಬ್ಬಿನ ಬಾಕಿ ಹಣ ಕೊಡಿಸ್ತಾರಾ ಎಚ್‌ಡಿಕೆ?        ಉ-ಕ ರೈತರ ಹೋರಾಟಕ್ಕೆ ಜಾತಿ ಲೇಪನ - ನಾಲಾಯಕ್ ಅನ್ನೋದು ಕೆಟ್ಟ ಪದ ಅಲ್ಲ - ಸಿಎಂ ವಿರುದ್ಧ ಮತ್ತೆ ಗುಡುಗಿದ ಯಡಿಯೂರಪ್ಪ        ಸಿಂಪಲ್ ಮ್ಯಾರೇಜ್ ಆಗೋರಿಗೆ ಶಾಕ್‌- ಮುಜರಾಯಿ ದೇವಸ್ಥಾನದಲ್ಲಿ ಮದುವೆಗೆ ಬ್ರೇಕ್‌ - ಅರ್ಚಕರ ಮನವಿಗೆ ಇಲಾಖೆ ನಿರ್ಧಾರ        ದಿಗ್ಗಜರಿಂದಲೇ ಬಿಬಿಎಂಪಿಗೆ ಬಾಕಿ - ಜಾರ್ಜ್‌, ಹ್ಯಾರೀಸ್‌, ಕುಪೇಂದ್ರರೆಡ್ಡಿ ಕಟ್ಟಿಲ್ಲ ಟ್ಯಾಕ್ಸ್‌ - ಪಾಲಿಕೆ ದಿವಾಳಿಗೆ ಕಾರಣರಾದ್ರಾ ನಾಯಕರು        ಛತ್ತಿಸ್‌ಗಡದಲ್ಲಿ ಎರಡನೇ ಹಂತದ ಮತದಾನ -72 ವಿಧಾನಸಭಾ ಕ್ಷೇತ್ರಗಳಲ್ಲಿ ವೋಟಿಂಗ್‌ - ಮಧ್ಯ ಪ್ರದೇಶದಲ್ಲಿ ಪ್ರಧಾನಿ ರ‍್ಯಾಲಿ        ಬೆಂಗಳೂರಿಗೆ ಬಂದಿಳಿದ ನವಜೋಡಿ - ಮುಂಬೈನಿಂದ ಸಿಲಿಕಾನ್‌ ಸಿಟಿಗೆ ರಣವೀರ್‌, ದೀಪಿಕಾ - ನಾಳೆ ಲೀಲಾ ಪ್ಯಾಲೇಸ್‌ನಲ್ಲಿ ರಿಸೆಪ್ಷನ್       
Breaking News

12ನೇ ಮಹಡಿಯಿಂದ ಹಾರಿದ ಬೆಂಗಳೂರು ಮೂಲದ ಸಂಗೀತಕಾರ

Sunday, 10.09.2017, 11:07 AM       No Comments

ಮುಂಬೈ: ಬೆಂಗಳೂರು ಮೂಲದ 29 ವರ್ಷದ ಸಂಗೀತಕಾರ 12 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈನ ಬಾಂದ್ರಾ ಉಪನಗರದಲ್ಲಿ ನಡೆದಿದೆ.

ಮೃತ ಕರಣ್‌ ಜೋಸೆಫ್‌ ಬಾಂದ್ರಾದ ಬುಲ್ಲೋಕ್‌ ರಸ್ತೆಯಲ್ಲಿ ಸ್ನೇಹಿತ ರಿಶಿ ಷಾ ಜತೆಯಲ್ಲಿ ಕಳೆದ ಒಂದು ತಿಂಗಳಿಂದ ವಾಸವಿದ್ದರು. ಆತ 12ನೇ ಮಹಡಿಯಲ್ಲಿರುವ ಫ್ಲಾಟ್‌ನ ಕಿಟಕಿಯಿಂದ ಧುಮುಕಿದ್ದರು.ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆವೇಳೆಗಾಗಲೇ ಆತ ಮೃತಪಟ್ಟಿದ್ದ ಎಂದು ವೈದ್ಯರು ದೃಢೀಕರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ಷಣ ಕ್ಷಣದ ತಾಜಾ ಸುದ್ದಿಗಾಗಿ ವಿಜಯವಾಣಿ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಶನಿವಾರ ಮುಂಜಾನೆ 8.30ರ ಸುಮಾರಿಗೆ ಕರಣ್‌ ಮತ್ತು ರಿಷಿ ತನ್ನ ಇತರೆ ಸ್ನೇಹಿತರೊಂದಿಗೆ ಟಿವಿ ನೋಡುತ್ತಿದ್ದರು. ಆನಂತರ ಕರಣ್‌, ಕಿಟಕಿ ಬಳಿ ಹೋಗಿ ಧುಮುಕಿದ್ದಾನೆ. ಶುಕ್ರವಾರ ರಾತ್ರಿಯಿಂದಲೇ ಹೊರಗಡೆ ಹೋಗಿದ್ದ ಕರಣ್‌ ಶನಿವಾರ ಬೆಳಗ್ಗೆ ಫ್ಲಾಟ್‌ಗೆ ಆಗಮಿಸಿದ್ದ. ಆನಂತರ ಆತ ಖಿನ್ನತೆಗೆ ಒಳಗಾದವನಂತೆ ಕಾಣುತ್ತಿದ್ದ ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಕರಣ್‌ನ ಮೊಬೈಲ್‌ ಫೋನ ಅನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಈ ಕುರಿತು ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಘಟನೆ ಕುರಿತು ಗಾಯಕ ಮತ್ತು ಸಂಗೀತ ನಿರ್ದೇಶಕ ವಿಶಾಲ್‌ ದಾದ್ಲಾನಿ ಟ್ವೀಟ್‌ ಮಾಡಿದ್ದು, ಕರಣ್‌ ಜೋಹರ್‌ ಸಾವಿನಿಂದ ಒಬ್ಬ ಅದ್ಭುತ ಸಂಗೀತಗಾರನನ್ನು ಕಳೆದುಕೊಂಡಂತಾಗಿದೆ ಎಂದಿದ್ದಾರೆ. (ಏಜೆನ್ಸೀಸ್​)

Leave a Reply

Your email address will not be published. Required fields are marked *

Back To Top