31ರಂದು ತಡರಾತ್ರಿವರೆಗೆ ಬಸ್ ಸೇವೆ

ಬೆಂಗಳೂರು: ಎಂ.ಜಿ. ರಸ್ತೆಯಲ್ಲಿ ನಡೆಯುವ ಹೊಸ ವರ್ಷಾಚರಣೆಯಲ್ಲಿ ಪಾಲ್ಗೊಳ್ಳುವ ಸಾರ್ವಜನಿಕರ ಅನುಕೂಲಕ್ಕಾಗಿ ಬಿಗ್ 10 ಮಾರ್ಗದಲ್ಲಿ ಸಂಚರಿಸುವ ಬಸ್ ಸೇವೆಯನ್ನು ಡಿ.31ರ ತಡರಾತ್ರಿವರೆಗೆ ಬಿಎಂಟಿಸಿ ವಿಸ್ತರಿಸಿದೆ. 31ರ ರಾತ್ರಿ 11.30ರಿಂದ ಜ.1ರ ಮಧ್ಯರಾತ್ರಿ 2 ಗಂಟೆಯವರೆಗೆ ಬಸ್ ಸಂಚಾರ ವ್ಯವಸ್ಥೆ ಮಾಡಲಾಗಿದೆ. ಎಂ.ಜಿ.ರಸ್ತೆ ಮತ್ತು ಬ್ರಿಗೇಡ್ ರಸ್ತೆಯಿಂದ ಕಾಡುಗೋಡಿ, ಸರ್ಜಾಪುರ, ಎಲೆಕ್ಟ್ರಾನಿಕ್ಸ್ ಸಿಟಿ, ಬನ್ನೇರುಘಟ್ಟ, ಕೆಂಗೇರಿ, ಜನಪ್ರಿಯ ಟೌನ್​ಶಿಪ್, ನೆಲಮಂಗಲ, ಯಲಹಂಕ ಉಪನಗರ, ಆರ್.ಕೆ. ಹೆಗಡೆ ನಗರ, ಬಾಗಲೂರು ಮತ್ತು ಹೊಸಕೋಟೆವರೆಗೆ ಬಸ್​ಗಳು ಸಂಚರಿಸಲಿವೆ. ಸಂಪಿಗೆರಸ್ತೆ ಮೆಟ್ರೋ ನಿಲ್ದಾಣದಿಂದ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಮತ್ತು ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಶಿವಾಜಿನಗರ ಹಾಗೂ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಪ್ರಯಾಣಿಕರ ಸಂಖ್ಯೆಯನ್ನಾಧರಿಸಿ ಬಸ್ ಸಂಚಾರಕ್ಕೆ ನಿರ್ಧರಿಸಲಾಗಿದೆ.