More

    ಬೆಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಬಿ ದಯಾನಂದ ನೇಮಕ

    ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಪ್ರತಾಪ್ ರೆಡ್ಡಿ ಅವರನ್ನು ವರ್ಗಾವಣೆಗೊಳಿಸಿ, ಅವರ ಸ್ಥಾನಕ್ಕೆ ಬಿ ದಯಾನಂದ ಅವರನ್ನು ಆಯುಕ್ತರನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಇಂದು (ಮೇ 30) ಆದೇಶ ಹೊರಡಿಸಿದೆ. ಮುಂದಿನ ಆದೇಶದವರೆಗೆ ಪ್ರತಾಪ್​ ರೆಡ್ಡಿ ಅವರು ಆಂತರಿಕ ಭದ್ರತಾ ವಿಭಾದ ಡಿಜಿಪಿಯನ್ನಾಗಿ ಸರ್ಕಾರ ನೇಮಿಸಿದೆ.

    ಬೆಂಗಳೂರು ನಗರ ನೂತನ ಪೊಲೀಸ್ ಆಯುಕ್ತ ಬಿ ದಯಾನಂದ ಅವರು ಈ ಹಿಂದೆ ಗುಪ್ತಚರ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರಾಗಿದ್ದರು. ಇದನ್ನೂ ಓದಿ: ದ್ವೇಷದ ರಾಜಕಾರಣ, ತೇಜೋವಧೆ ಮಾಡುವ ಟ್ರೋಲ್​ಗಳ ವಿರುದ್ಧ ಕಠಿಣ ಕ್ರಮ; ಸಿಎಂ ಖಡಕ್ ಸೂಚನೆ!

    ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಮೂಲದ ಬಿ.ದಯಾನಂದ್ 1994ನೇ ಬ್ಯಾಚ್​ನ ಐಪಿಎಸ್ ಅಧಿಕಾರಿ. ಹಲವು ಉನ್ನತ ಹುದ್ದೆಗಳನ್ನು ನಿರ್ವಹಿಸಿದ ಅನುಭವ ಹೊಂದಿದ್ದು, ಮೈಸೂರು ನಗರ ಪೊಲೀಸ್ ಆಯುಕ್ತರಾಗಿ, ಬೆಂಗಳೂರಿನಲ್ಲಿ ಅಪರಾಧ ವಿಭಾಗದ ಜಂಟಿ ಆಯುಕ್ತರಾಗಿ, ಸಂಚಾರ ವಿಭಾಗದ ಆಯುಕ್ತರಾಗಿ ಕರ್ತವ್ಯ ನಿರ್ವಹಿಸಿದ್ದಾರೆ.

    ಇದನ್ನೂ ಓದಿ: ಡೇಟಿಂಗ್ ಮಾಡಬೇಕೆಂದಿದ್ದ ಅಕೌಂಟೆಂಟ್​ಗೆ 2.83 ಲಕ್ಷ ರೂ. ಪಂಗನಾಮ ಹಾಕಿದ್ಲು ನಗ್ನವಾಗಿ ವಿಡಿಯೋ ಕಾಲ್ ಮಾಡಿದ್ದ ಹುಡುಗಿ!

    ಟ್ರಾಫಿಕ್‌ನ ವಿಶೇಷ ಆಯುಕ್ತ ಹಾಗೂ ಎಡಿಜಿಪಿ ಎಂಎ ಸಲೀಂ ಅವರನ್ನು ಸಿಐಡಿ ವಿಭಾಗದ ಡಿಜಿಪಿ ಆಗಿ ನೇಮಿಸಲಾಗಿದೆ. ಕೆವಿ ಶರತ್‌ ಚಂದ್ರ ಅವರನ್ನು ಗುಪ್ತಚರ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಇದೀಗ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿರುವ ಸರ್ಕಾರ, ಒಂದೇ ದಿನ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. 

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts