ನೆಲಮಂಗಲದ ಪ್ರವಾಸಿ ಮಂದಿರದ ಬಾತ್​ರೂಮ್​ನಲ್ಲಿ ಪಿಡಬ್ಲ್ಯುಡಿ ಅಧಿಕಾರಿ ಸಾವಿಗೆ ಶರಣು

PWD Officer
Published on

ಬೆಂಗಳೂರು: ನೇಣುಬಿಗಿದುಕೊಂಡು ಪಿಡಬ್ಲ್ಯುಡಿ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲ ತಾಲೂಕಿನ ಶಿವಗಂಗೆಯ ಪ್ರವಾಸಿ ಮಂದಿರದಲ್ಲಿ ನಡೆದಿದೆ.

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ನಿವಾಸಿ ಲಕ್ಷ್ಮೀನರಸಿಂಹಯ್ಯ (54) ಮೃತ ದುರ್ದೈವಿ. ಕಚೇರಿಗೆ ಸಂಬಂಧಪಟ್ಟ ಫೈಲ್ ನಾಪತ್ತೆಯಾದ ಹಿನ್ನೆಲೆಯಲ್ಲಿ ಒತ್ತದಿಂದ ನೇಣು ಬಿಗಿದುಕೊಂಡು‌ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ದಾಬಸ್‌ಪೇಟೆ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net