ರಾಜಧಾನಿಯಲ್ಲಿ ಮಳೆ ಪ್ರವಾಹ

ಬೆಂಗಳೂರು: ರಾಜಧಾನಿಯಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಬುಧವಾರ ಸುರಿದ ಭಾರಿ ಮಳೆಗೆ ನಗರದ ಹಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿತ್ತು.

ಬೊಮ್ಮನಹಳ್ಳಿ, ಬನ್ನೇರುಘಟ್ಟ, ಸಿಲ್ಕ್ ಬೋರ್ಡ್ ಸುತ್ತಮುತ್ತ ರಸ್ತೆಗಳು ಜಲಾವೃತವಾದ ಪರಿಣಾಮ ವಾಹನ ಸವಾರರು ತೀವ್ರ ತೊಂದರೆ ಅನುಭವಿಸಿದರು, ಕೆಲವು ಬಡಾವಣೆಗಳಲ್ಲೂ ಜನರು ಮನೆಯಿಂದ ಹೊರಬರಲಾರದ ಸ್ಥಿತಿಯಿತ್ತು.

ಮಳೆ ಜತೆ ಗಾಳಿಯೂ ಆರ್ಭಟಿಸಿದ ಪರಿಣಾಮ ಹಲವೆಡೆ ಮರಗಳು ಧರೆಗುರುಳಿವೆ. ಬಿಟಿಎಂ ಲೇಔಟ್​ನಲ್ಲಿ ಮರ ಬಿದ್ದು ಬೈಕ್ ಜಖಂಗೊಂಡಿದೆ. ಇನ್ನೂ ಎರಡು, ಮೂರು ದಿನ ಮಳೆ ಮುಂದುವರಿಯುವ ಸಾಧ್ಯತೆಯಿದೆ.

Leave a Reply

Your email address will not be published. Required fields are marked *