

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಮೆಜೆಸ್ಟಿಕ್, ಶಾಂತಿನಗರ, ಕಾರ್ಪೊರೇಷನ್, ವಿಜಯನಗರ, ರಾಜಾಜಿನಗರ, ಮಲ್ಲೇಶ್ವರಂ, ಜಯನಗರ, ಬಸವನಗುಡಿ, ಕೆಆರ್ ಮಾರ್ಕೆಟ್ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ. ಇಂದು ಸಂಜೆ ಸುರಿದ ಭಾರೀ ಮಳೆಗೆ ಮಹಾನಗರದ ಹಲವೆಡೆ ರಸ್ತೆಗಳು ಜಲಾವೃತಗೊಂಡಿದ್ದು ಕಂಡು ಬಂದಿದೆ.
ಆರ್.ಆರ್.ನಗರ, ನಾಯಂಡಳ್ಳಿ, ಸ್ಯಾಟ್ಲೈಟ್, ಟೌನ್ಹಾಲ್, ಶಾಂತಿನಗರ ಸೇರಿದಂತೆ ಹಲವೆಡೆ ಧಾರಾಕಾರ ಮಳೆ ಆಗಿದೆ. ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಬಸ್ ನಿಲ್ದಾಣ, ಫ್ಲೈ ಓವರ್ ಕೆಳಗೆ ನಿಲ್ಲುವ ಮೂಲಕ ದ್ವಿಚಕ್ರ ವಾಹನ ಸವಾರರು ಮಳೆಯಿಂದ ರಕ್ಷಣೆ ಪಡೆದುಕೊಂಡಿದ್ದಾರೆ.