ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಆರೋಪಿ ಅಂದರ್‌

ಬೆಂಗಳೂರು: ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಹೊಸಕೋಟೆ ತಾಲೂಕಿನ ಗ್ರಾಮವೊಂದರಲ್ಲಿ ಮನೆ ಮುಂದೆ ಆಟವಾಡುತ್ತಿದ್ದ ಐದು ವರ್ಷದ ಬಾಲಕಿಯನ್ನು ಫುಸಲಾಯಿಸಿ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.

ಮನೆಯ ಬಳಿ ಮಗು ಇಲ್ಲದ್ದನ್ನು ಕಂಡು ಪೋಷಕರು ಹುಡುಕಾಟ ನಡೆಸಿದಾಗ ಆರೋಪಿ ಬಕ್ಷುಸಾಬ್ ಮನೆಯಲ್ಲಿ ನಿತ್ರಾಣಗೊಂಡಿದ್ದ ಸ್ಥಿತಿಯಲ್ಲಿ ಬಾಲಕಿ ಪತ್ತೆಯಾಗಿದ್ದಳು.

ಈ ಕುರಿತು ಪಾಲಕರು ನಂದಗುಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆರೋಪಿ ಬಕ್ಷುಸಾಬ್​​(60)ನನ್ನು ಪೊಲೀಸರು ಬಂಧಿಸಿದ್ದಾರೆ.

ನಂದಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್)